ಜಿಲ್ಲೆ

ವಚನ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ. ಅರವಿಂದ ಜತ್ತಿ ಆಯ್ಕೆ


ಮಂಗಳೂರು : ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜ.4ರಂದು ನಡೆಯಲಿರುವ ರಾಜ್ಯಮಟ್ಟದ ವಚನ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ. ಅರವಿಂದ ಜತ್ತಿ ಆಯ್ಕೆಯಾಗಿದ್ದಾರೆ. ಇವರು ಮಾಜಿ ಉಪ ರಾಷ್ಟ್ರಪತಿ ದಿ. ಬಿ.ಡಿ. ಜತ್ತಿಯವರ ಪುತ್ರ . ಬೆಂಗಳೂರಿನ ಹೃದಯ ಭಾಗದಲ್ಲಿ ಅಶ್ವಾರೂಢ ಬಸವೇಶ್ವರರ ಕಂಚಿನ ಪ್ರತಿಮೆ ಸ್ಥಾಪನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ವಚನ ಪ್ರಜ್ಞೆಯ ವಿಕಾಸಕ್ಕಾಗಿ ಬಹಳಷ್ಟು ಕಾರ್ಯಕ್ರಮಗಳನ್ನು ಅಂತರರಾಜ್ಯ ಮಟ್ಟದಲ್ಲಿ ಹಮ್ಮಿಕೊಂಡು ಪ್ರಸಿದ್ಧರಾಗಿದ್ದಾರೆ ಎಂದು ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಮತ್ತು ಅಕ್ಕಮಹಾದೇವಿ ವೀರಶೈವ ಮಹಿಳಾ ಸಂಘದ ಅಧ್ಯಕ್ಷೆ ಸುಮಾ ಅರುಣ್ ಮಾನ್ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.