ಬೆಂಗಳೂರು: ರಾಷ್ಟ್ರೀಯ ವೈದ್ಯಕೀಯ ಆಯೋಗದ (ಎನ್‌ಎಂಸಿ) ನೂತನ ಮುಖ್ಯಸ್ಥರಾಗಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಕನ್ನಡಿಗ ಡಾ. ಬಿ.ಎನ್. ಗಂಗಾಧರ್ ನೇಮಕವಾಗಿದ್ದಾರೆ.
ರಾಷ್ಟ್ರೀಯ ಮಾನಸಿಕ ಆರೋಗ್ಯ ನರವಿಜ್ಞಾನ ಸಂಸ್ಥೆಯ (ನಿಮ್ಹಾನ್ಸ್) ನಿರ್ದೇಶಕರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದ ಡಾ. ಬಿ.ಎನ್. ಗಂಗಾಧರ್ ಅವರನ್ನು ರಾಷ್ಟ್ರ ಮಟ್ಟದ ಈ ಉನ್ನತ ವೈದ್ಯಕೀಯ ಆಯೋಗಕ್ಕೆ ಮುಖ್ಯಸ್ಥರನ್ನಾಗಿ ಕೇಂದ್ರ ಸರ್ಕಾರ ನೇಮಿಸಿದೆ.