ಮಂಗಳೂರು: ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 132ನೇ ಜಯಂತಿ ಹಿನ್ನೆಲೆಯಲ್ಲಿ ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಶುಕ್ರವಾರ ಗೌರವ ನಮನ ಸಲ್ಲಿಸಲಾಯಿತು.
ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕುಮಾರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಂ ವಿ. ಅಮಟೆ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಚನ್ನಬಸಪ್ಪ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಾಲತಿ, ಇತರೆ ಅಧಿಕಾರಿಗಳು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಗೌರವ ಅರ್ಪಿಸಿದರು.
ರಾಜ್ಯ ವಿಧಾನಸಭೆಯ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಗೊಂಡಿರುವ ಕಾರಣ ಜಯಂತಿಯನ್ನು ಸರಳ ಹಾಗೂ ಸಂಕೇತಿಕವಾಗಿ ಆರಿಸಲಾಯಿತು.