ಜಿಲ್ಲೆ

ಜಯದೇವ ಆಸ್ಪತ್ರೆ ನಿರ್ದೇಶಕರಾಗಿ ಡಾ.ಸಿ.ಎನ್. ಮಂಜುನಾಥ್ ಮುಂದುವರಿಕೆ

ಬೆಂಗಳೂರು: ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರನ್ನಾಗಿ ಡಾ.ಸಿ.ಎನ್. ಮಂಜುನಾಥ್ ಅವರನ್ನೇ ಸರ್ಕಾರ ಮುಂದುವರಿಸಿದೆ. ಅವರು ಇನ್ನು ಒಂದು ವರ್ಷದ ಅವಧಿಗೆ ಈ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ.

ಡಾ.ಸಿ.ಎನ್. ಮಂಜುನಾಥ್ ಅವರ ಸಾಧನೆ ಮತ್ತು ಆಡಳಿತ ವೈಖರಿಯನ್ನು ಪರಿಗಣಿಸಿ ಅವರನ್ನು ನಿರ್ದೇಶಕ ಸ್ಥಾನದಲ್ಲಿ ಸರ್ಕಾರ ಇನ್ನೂ ಒಂದು ವರ್ಷಕ್ಕೆ ಮುಂದುವರಿಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಮತ್ತು ವೈದ್ಯಕೀಯ ಶಿಕ್ಷಣ ಸಚಿವರೂ ಆಗಿರುವ ಡಾ.ಕೆ. ಸುಧಾಕರ್ ಅವರಿಗೆ ಡಾ.ಸಿ.ಎನ್. ಮಂಜುನಾಥ್ ಅಭಿನಂದನೆಯನ್ನು ತಿಳಿಸಿದ್ದಾರೆ.

ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ ಅವರನ್ನೇ ನಿರ್ದೇಶಕರನ್ನಾಗಿ ಮುಂದುವರಿಸುವಂತೆ ಆಗ್ರಹಿಸಿ ಸಂಸ್ಥೆಯ ವೈದ್ಯರು ಹಾಗೂ ಸಿಬ್ಬಂದಿ ವರ್ಗದವರು ಸರ್ಕಾರಕ್ಕೆ ಪತ್ರ ಬರೆದಿದ್ದರು. ನಿರ್ದೇಶಕ ಡಾ.ಸಿ.ಎನ್​. ಮಂಜುನಾಥ್ ಅವರ ಈ ಹಿಂದಿನ ಅಧಿಕಾರಾವಧಿ ನಾಳೆಗೆ ಮುಗಿಯಲಿದೆ.