ಜಿಲ್ಲೆ

ಡಾ ಸಿ ಎನ್ ಮಂಜುನಾಥ್ ನಾಮಪತ್ರ ಸಲ್ಲಿಕೆ

ಗಂಗಾಧರ ಬಿ ವಿ

ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ .ಸಿ ಎನ್ ಮಂಜುನಾಥ್ ಗುರುವಾರ ನಾಮಪತ್ರ ಸಲ್ಲಿಕೆ ಮಾಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಚುನಾವಣಾಧಿಕಾರಿ ಕಚೇರಿಗೆ ಪತ್ನಿ ಅನಸೂಯ, ಶಾಸಕರಾದ ಮುನಿರತ್ನ, ಎಂ‌ ಕೃಷ್ಣಪ್ಪ, ಮಾಜಿ ಸಚಿವ ಡಾ ಸಿ ಎನ್ ಅಶ್ವತ್ಥ ನಾರಾಯಣ ಅವರೊಟ್ಟಿಗೆ ತೆರಳಿ ಚುನಾವಣಾಧಿಕಾರಿ ಡಾ ಅವಿನಾಶ್ ಮೆನನ್ ರಾಜೇಂದ್ರನ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಇದಕ್ಕೂ ಮುನ್ನಾ ನಗರದ ಚಾಮುಮಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು. ಅನಂತರ ನಗರದ ಎಸ್ ಪಿ ಕಚೇರಿ ವೃತ್ತದಿಂದ ಅಬ್ಬರ ಇಲ್ಲದೆ ಮೆರವಣಿಗೆಯಲ್ಲಿ ಸಾಗಿ ಬಂದರು.