ಮುಧೋಳ: ಹಸಿರು ಕ್ರಾಂತಿಯ ಹರಿಕಾರ, ಭಾರತ ದೇಶದ ಪ್ರಥಮ ಉಪ ಪ್ರಧಾನಿಗಳಾಗಿ ದೇಶದ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡಿದ ಡಾ. ಬಾಬು ಜಗಜೀವನ್‌ರಾಂ ಅವರ ಆದರ್ಶ ಮೌಲ್ಯಗಳು ನಮಗೆಲ್ಲ ಪ್ರೇರಣೆಯಾಗಿವೆ ಎಂದು ಉಪ ತಹಸೀಲ್ದಾರ್ ಎಂ.ಬಿ. ಮಟಗಾರ ಹೇಳಿದರು.
ಡಾ. ಬಾಬು ಜಗಜೀವನ್‌ರಾಂ ಅವರ 38ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಡಾ. ಬಾಬು ಜಗಜೀವನರಾಂ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಜನಪ್ರತಿನಿಧಿಗಳು, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮೋಹನ್ ಕೋರಡ್ಡಿ, ನಗರಸಭೆ ಆಯುಕ್ತ ಗೋಪಾಲ ಕಾಸೆ, ವಿವಿಧ ಇಲಾಖೆಗಳ ಅಧಿಕಾರಿಗಳು, ವಸತಿ ನಿಲಯಗಳ ಮೇಲ್ವಿಚಾರಕರು, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಸಿಬ್ಬಂದಿ ಇದ್ದರು.