ಅರ್ಥಧಾರಿ ಡಾ. ಜಿ.ಎಲ್. ಹೆಗಡೆ
ಸರ್ಪಂಗಳ ಈಶ್ವರ ಭಟ್ ಆಯ್ಕೆ
ಉಡುಪಿಯ ಯಕ್ಷಗಾನ ಕಲಾರಂಗವು ಸಹೃದಯಿ ಕಲಾ ಪೋಷಕ ಮಟ್ಟಿ ಮುರಲೀಧರ ರಾವ್ ಮತ್ತು ಅರ್ಥಧಾರಿ ಪಂಡಿತ ಪೆರ್ಲ ಕೃಷ್ಣ ಭಟ್ ಸ್ಮರಣಾರ್ಥ ನೀಡುವ ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ಅರ್ಥಧಾರಿ, ಹವ್ಯಾಸಿ ವೇಷಧಾರಿ, ಸಂಘಟಕರಾದ ಡಾ. ಜಿ.ಎಲ್. ಹೆಗಡೆ ಹಾಗೂ ಸರ್ಪಂಗಳ ಈಶ್ವರ ಭಟ್ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು ತಲಾ 20 ಸಾವಿರ ರೂ. ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿದೆ. ಕಲಾರಂಗ ಸಂಸ್ಥೆಯ ಐವೈಸಿ ಸಭಾಂಗಣದಲ್ಲಿ ಜುಲೈ 12ರಂದು ತಾಳಮದ್ದಲೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ.ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.