ಡಾ.ಎಚ್.ತಿಪ್ಪೇರುದ್ರಸ್ವಾಮಿ ಸಂಸ್ಮರಣ ಸಮಿತಿ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ನಗರ ಹಾಗೂ ಜಿಲ್ಲಾ ಘಟಕ, ಕದಳಿ ಮಹಿಳಾ ವೇದಿಕೆ, ಸಂವಹನ ಪ್ರಕಾಶಕರು ಸಹಯೋಗದಲ್ಲಿ ಜುಲೈ 23 ರಂದು ಡಾ.ಎಚ್.ತಿಪ್ಪೇರುದ್ರಸ್ವಾಮಿ 95ರ ಸಂಸ್ಮರಣಾ ಕಾರ್ಯಕ್ರಮ ಆಯೋಜಿಸಲಾಗಿದೆ.
ನಗರದ ಸರಸ್ವತಿಪುರಂನ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಅಂದು ಬೆಳಗ್ಗೆ 10.30ಕ್ಕೆ ಸಂಸ್ಮರಣಾದ ಅಂಗವಾಗಿ ದತ್ತಿ ಉಪನ್ಯಾಸ ಮತ್ತು ಸಂಸ್ಮರಣಾ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಕಾರ್ಯಕ್ರಮದ ಸಾನಿಧ್ಯ ವಹಿಸುವ ಜತೆಗೆ ‘ಬಯಲ ಬೆಳಗು’ ಕೃತಿ ಬಿಡುಗಡೆ ಮಾಡಲಿದ್ದಾರೆ.
ಹೊನ್ನಾಳಿ ಹಿರೇಕಲ್ಮಠದ ಶ್ರೀ ಒಡೆಯರ ಚನ್ನಮಲ್ಲಿಕಾರ್ಜುನ ಶಿವಾಚಾರ‌್ಯ ಸ್ವಾಮೀಜಿ ‘ನೆನಪಿನ ಬುತ್ತಿ’ ಕೃತಿ ಬಿಡುಗಡೆ ಮಾಡಲಿದ್ದಾರೆ. ಹಂಪಿ ವಿವಿ ಕುಲಪತಿ ಡಾ.ಡಿ.ವಿ.ಪರಮಶಿವಮೂರ್ತಿ ‘ಸಾಹಿತ್ಯಾವಲೋಕನ’ ಕೃತಿ ಬಿಡುಗಡೆ ಮಾಡಲಿದ್ದಾರೆ. ಸಾಹಿತಿಗಳಾದ ಡಾ.ಸಿ.ಪಿ.ಕೃಷ್ಣಕುಮಾರ್, ಡಾ.ವೀರಣ್ಣ ರಾಜೂರ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.