ಜಿಲ್ಲೆ

ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನಕ್ಕೆ ಡಾ. ಎಸ್.ಬಿ. ಕಾಮರೆಡ್ಡಿ ಸಂತಾಪ

Jಕಲಬುರಗಿ : ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯದ ಮುತ್ಸದ್ದಿ ರಾಜಕಾರಣಿ ಶ್ರೀ ಎಸ್ ಎಂ ಕೃಷ್ಣ ಅವರ ನಿಧನದಿಂದಾಗಿ ನಾಡು ಒಬ್ಬ ಅದ್ಭುತ ಆಡಳಿಗಾರರನ್ನು ಕಳೆದುಕೊಂಡಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಖ್ಯಾತ ವೈದ್ಯ ಡಾ.ಎಸ್.ಬಿ.ಕಾಮರೆಡ್ಡಿ ಶೋಕ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ವಿಚಾರ ತಿಳಿದು ತೀವ್ರ ಆಘಾತವಾಯಿತು. ಅತ್ಯಂತ ಸರಳ ಸಜ್ಜನಿಕೆಯ ರಾಜಕಾರಣಿಯಾಗಿದ್ದ ಅವರು ರಾಜ್ಯ ಕಂಡ ಮುತ್ಸದ್ದಿ ರಾಜಕಾರಣಿಗಳಲ್ಲಿ ಅವರೊಬ್ಬರು. ಅವರು ರಾಜ್ಯದ ಮುಖ್ಯಮಂತ್ರಿಯಾಗಿ. ಕೇಂದ್ರ ಸಚಿವರಾಗಿ ಹಾಗೂ ರಾಜ್ಯಪಾಲರಾಗಿ ಸಲ್ಲಿಸಿದ ಸೇವೆ ಅಪಾರವಾದದ್ದು ಅವಿಸ್ಮರಣೀಯವಾದದ್ದು ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದ ಕೀರ್ತಿ ಹಾಗೂ ಐಟಿಬಿಟಿ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯದ ಹೆಸರನ್ನು ವಿಶ್ವ ಮಟ್ಟದಲ್ಲಿ ಪರಿಚಯಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಅವರ ಜನಸೇವೆ ಜನಮಾನಸದಲ್ಲಿ ಅಚ್ಚಳಿಯದೆ ಉಳಿಯುತ್ತದೆ. ಅವರ ಅಗಲಿಕೆಯ ದುಃಖದಲ್ಲಿರುವ ಅವರ ಕುಟುಂಬ ವರ್ಗದವರ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಡಾ. ಎಸ್.ಬಿ. ಕಾಮರೆಡ್ಡಿ ಕಂಬನಿ ಮಿಡಿದಿದ್ದಾರೆ.