ಜಿಲ್ಲೆ

ಎಚ್ ಕೆಇ ಎಲೆಕ್ಷನ್ : ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಡಾ.ಎಸ್.ಬಿ.ಕಾಮರಡ್ಡಿ ಪೆನಾಲ್ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮ ಇಂದು ಸಂಜೆ

ಬಾಬುರಾವ ಯಡ್ರಾಮಿ


ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆ ನೂತನ ಆಡಳಿತ ಮಂಡಳಿ ಆಯ್ಕೆಗಾಗಿ ನಡೆಯಲಿರುವ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಡಾ.ಎಸ್.ಬಿ. ಕಾಮರಡ್ಡಿ ನೇತೃತ್ವದ ಪೆನಾಲ್‌ನ ಪ್ರಣಾಳಿಕೆ ಬಿಡುಗಡೆ ಸಮಾರಂಭ ಭಾನುವಾರ ಸಂಜೆ 6 ಕ್ಕೆ ನಗರದ ಸಾರ್ವಜನಿಕ ಉದ್ಯಾನದಲ್ಲಿರುವ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಕಾಮರಡ್ಡಿ ಈ ಹಿಂದೆ ಎಚ್‌ಕೆಇ ಆಡಳಿತ ಮಂಡಳಿ ಸದಸ್ಯರಾಗಿ ಮಾದರಿ ಕೆಲಸ ಮಾಡಿದ್ದಾರೆ. ಈ ಸಲ ಮತದಾರರು ಬದಲಾವಣೆ ಬಯಸುತ್ತಿರುವುದರಿಂದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವೆ. ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಎಲ್ಲ ಸದಸ್ಯರು ಪಾಲ್ಗೊಳ್ಳುವಂತೆ ಪೆನಾಲ್ ಸ್ಪರ್ಧಿಗಳು ಕೋರಿದ್ದಾರೆ.