ಶ್ರೀರಂಗಪಟ್ಟಣ; ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಮಂಗಳವಾರ ದಿಢೀರ್ ಭೇಟಿ ನೀಡಿ ನಿರ್ವಹಣೆ, ಸೇವೆ ಕುರಿತು ಪರಿಶೀಲಿಸಿದರು.
ಆಸ್ಪತ್ರೆಯಲ್ಲಿನ ಸ್ವಚ್ಛತೆ, ಶೌಚಾಲಯ ಹಾಗೂ ರೋಗಿಗಳಿಗೆ ಕಲ್ಪಿಸಲಾಗಿರುವ ವೈದ್ಯಕೀಯ ಸೇವಾ ಸೌಲಭ್ಯಗಳನ್ನು ವೀಕ್ಷಿಸಿ ವಾರ್ಡ್‌ಗಳಲ್ಲಿ ದಾಖಲಾಗಿರುವ ಮಹಿಳಾ ರೋಗಿಗಳೊಂದಿಗೆ ಚರ್ಚಿಸಿ ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಔಷಧೋಚಾರ ಹಾಗೂ ಇತರ ಸೇವೆಗಳ ಬಗ್ಗೆ ಮಾಹಿತಿ ಪಡೆದರು.
ಬಳಿಕ ಹೆರಿಗೆ ಕೊಠಡಿ, ಬಾಣಂತಿ ವಿಭಾಗ, ತುರ್ತು ಚಿಕಿತ್ಸಾ ವಿಭಾಗ, ಹೊರರೋಗಿಗಳ ವಿಭಾಗ ಸೇರಿದಂತೆ ವಿವಿಧ ವಿಭಾಗಗಳಿಗೆ ತೆರಳಿ ಕೊಠಡಿಗಳ ನಿರ್ವಹಣೆ ಪರಿಶೀಲಿಸಿದ ವೇಳೆ ರೋಗಿಗಳು ಉತ್ತಮ ವ್ಯವಸ್ಥೆ ಂದು ಪ್ರತಿಕ್ರಿಯೆ ನೀಡಿದರು. ಬಾಣಂತಿ ವಾರ್ಡ್‌ನಲ್ಲಿದ್ದ ಮಹಿಳೆಯರು ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಪಿ.ಮಾರುತಿ, ಶುಶ್ರೂಷಣಾಧಿಕಾರಿಗಳು ಇದ್ದರು.