ಬೆಳಗಾವಿ: ಬೆಳಗಾವಿಯ ವಡಗಾವಿಯಲ್ಲಿ 2007ರಲ್ಲಿ ನಿರ್ಮಿಸಿದ ಗಡಿಭವನಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅವರು ಶುಕ್ರವಾರ ಬೆಳಗ್ಗೆ ಭೇಟಿ ನೀಡಿ, ದುಸ್ಥಿತಿ ಪರಿಶೀಲಿಸಿದರು. ಗಡಿಭವನದ ಬಗ್ಗೆ ವರದಿ ನೀಡುವಂತೆ ಬಿಳಿಮಲೆ ಅವರು ಮಹಾನಗರ ಪಾಲಿಕೆಯ ಆಯುಕ್ತೆ ಶುಭ ಬಿ. ಅವರಿಗೆ ಸೂಚನೆ ನೀಡಿದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯೆ ದ್ರಾಕ್ಷಾಯಿಣಿ ಹುಡೇದ, ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಅಶೋಕ ಚಂದರಗಿ, ಬಸವರಾಜ ಕಟ್ಟೀಮನಿ ಪ್ರತಿಷ್ಠಾನದ ಅಧ್ಯಕ್ಷ ವೈ.ಬಿ.ಹಿಮ್ಮಡಿ, ಮಹಾನಗರ ಪಾಲಿಕೆ ಸದಸ್ಯ ರಮೇಶ ಸೊಂಟಕ್ಕಿ ಇದ್ದರು.