ಕಾರ್ಕಳ: ಸೋದೆ ಶ್ರೀ ವಾದಿರಾಜ ಮಠಕ್ಕೆ ಸೇರಿದ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಮುಖ್ಯ ಆಡಳಿತಾಧಿಕಾರಿಯಾಗಿ ಡಾ.ರಾಧಾಕೃಷ್ಣ ಎಸ್. ಐತಾಳ್ ನೇಮಕಗೊಂಡಿದ್ದು, ಸೋಮವಾರ ಅಧಿಕಾರ ವಹಿಸಿಕೊಂಡರು.
ಶೈಕ್ಷಣಿಕ ಕ್ಷೇತ್ರದಲ್ಲಿ 38 ವರ್ಷಗಳಿಗೂ ಅಧಿಕ ಅನುಭವ ಹೊಂದಿದ್ದು, ಅಂತಾರಾಷ್ಟ್ರೀಯ ಅನ್ವಯಿಕ ವಿಜ್ಞಾನ ಶಿಕ್ಷಣ ಕೇಂದ್ರದ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಮೂರು ವರ್ಷ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಹಾಗೂ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ.
ಶ್ರೀ ಸೋದೆ ವಾದಿರಾಜ ಶಿಕ್ಷಣ ಪ್ರತಿಷ್ಠಾನದ ಕಾರ್ಯದರ್ಶಿ ರತ್ನಕುಮಾರ್, ಆಡಳಿತ ಮಂಡಳಿ ಸದಸ್ಯ ಹರೀಶ್ ಬೆಳ್ಮಣ್, ವಿವಿಧ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು, ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ, ಎಂಬಿಎ ವಿಭಾಗದ ನಿರ್ದೇಶಕರು, ಡೀನ್‌ಗಳು ಉಪಸ್ಥಿತರಿದ್ದರು.