ರಾಜೇಂದ್ರ ನಾಯಕ  
ಜಿಲ್ಲೆ

ಪ್ರಾಂಶುಪಾಲರಾಗಿ ಡಾ.ರಾಜೇಂದ್ರ ಅಧಿಕಾರ ಸ್ವೀಕಾರ

ಕೋಟ: ಕೋಟ ಪಡುಕರೆ ಲಕ್ಷ್ಮೀಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾಗಿ ಡಾ.ರಾಜೇಂದ್ರ ಎಸ್ ನಾಯಕ ಇತ್ತೀಚೆಗೆ ಅಧಿಕಾರ ಸ್ವೀಕರಿಸಿದರು. ಅವರು ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕಾಳಾವರ ವರದರಾಜ್ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಲಕ್ಷ್ಮೀಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿದ್ದರು. ಜತೆಗೆ ಹಲವು ಮಕ್ಕಳ ತಾಯಿ ಶ್ರೀ ಅಮೃತೇಶ್ವರಿ ದೇವಳದ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದು, ಮಂಗಳೂರು ವಿಶ್ವವಿದ್ಯಾಲಯದ ಅಕಾಡೆಮಿ ಕೌನ್ಸಿಲ್ ಸದಸ್ಯರಾಗಿ, ಸಿಂಡಿಕೇಟ್ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದಾರೆ.