ಜಿಲ್ಲೆ

ಕನ್ನಡದ ಮೇರು ನಟ ಸಜ್ಜನಿಕೆಯ ಕಲಾವಿದ ಡಾ. ರಾಜ್‌ಕುಮಾರ್

Kolar

ಕೋಲಾರ: ಡಾ. ರಾಜ್‌ಕುಮಾರ್ ಕನ್ನಡದ ಮೇರು ನಟರಾಗಿ ಸರಳ ಸಜ್ಜನಿಕೆಯ ಅಪೂರ್ವ ಕಲಾವಿದರಾಗಿದ್ದರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್. ನಾಗೇಶ್ ಹೇಳಿದರು.

ಜಿಲ್ಲಾಡಳಿತ, ಜಿಪಂ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಡಾ. ರಾಜ್‌ಕುಮಾರ್ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಡಾ. ರಾಜ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿ, ಅವರ ಕನ್ನಡ ಪ್ರೇಮವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ಸಿ. ಸತ್ಯಭಾಮ ಮಾತನಾಡಿ, ಕನ್ನಡ ನಾಡು, ನುಡಿಗಾಗಿ ಡಾ. ರಾಜ್ ಅವರ ಕೊಡುಗೆ ಅಪಾರ. ಅವರ ಮೊದಲ ಚಿತ್ರ ಬೇಡರ ಕಣ್ಣಪ್ಪ, ಪ್ರತಿಯೊಂದು ಚಿತ್ರಗಳು ಒಂದೊಂದು ಸಂದೇಶವನ್ನು ಸಮಾಜಕ್ಕೆ ನೀಡುತ್ತವೆ ಎಂದರು.

ಕಸಾಪ ಜಿಲ್ಲಾಧ್ಯಕ್ಷ ನಾಗಾನಂದ ಕೆಂಪರಾಜು ಮಾತನಾಡಿ, ಹುಟ್ಟಿನಿಂದ ಸಾವಿನವರೆಗೆ ಡಾ. ರಾಜ್ ಸಾರ್ಥಕ ಜೀವನ ನಡೆಸಿದರು ಎಂದರು.

ಸಂಸದ ಎಸ್. ಮುನಿಸ್ವಾಮಿ, ಜಿಪಂ ಅಧ್ಯಕ್ಷ ಸಿ.ಎಸ್. ವೆಂಕಟೇಶ್, ಜಿಪಂ ಸಿಇಒ ಎಚ್.ವಿ.ದರ್ಶನ್, ಅಪರ ಜಿಲ್ಲಾಧಿಕಾರಿ ಬಿ.ಶಿವಸ್ವಾಮಿ, ಉಪ ವಿಭಾಗಾಧಿಕಾರಿ ಸೋಮಶೇಖರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ವಾರ್ತಾಧಿಕಾರಿ ಕೆ.ಎನ್. ರಮೇಶ್, ಕನ್ನಡಪರ ಸಂಘಟನೆ ಮುಖಂಡರಾದ ಕಲಾವಿದ ವಿಷ್ಣು, ಕೋ.ನಾ.ಪ್ರಭಾಕರ್, ಕಲಾವಿದ ಜನ್ನಘಟ್ಟ ಕೃಷ್ಣಮೂರ್ತಿ, ಕೋ.ನಾ.ಮಂಜುನಾಥ್ ಹಾಜರಿದ್ದರು.