ಜಿಲ್ಲೆ

ಡಾ.ರೇಣುಪ್ರಸಾದ್ ನೂತನ ಡಿಎಚ್‌ಒ

ಚಿತ್ರದುರ್ಗ: ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಅವರನ್ನು ಚಿತ್ರದುರ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ. ದಾವಣಗೆರೆ ಆರನಕಲ್ಲು ಮೂಲದ ಅವರು ಚಿತ್ರದುರ್ಗ ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ಹಲವು ವರ್ಷ ಜಿಲ್ಲಾ ಸರ್ವೇಕ್ಷಣಾಧಿಕಾರಿಯಾಗಿದ್ದರು. ಆರೋಗ್ಯ ಇಲಾಖೆಯಲ್ಲಿನ ವಿವಿಧ ಪ್ರಕರಣಗಳ ತನಿಖೆ ನಡೆಸಿ, ವರದಿ ನೀಡುವ ಜವಾಬ್ದಾರಿ ನಿರ್ವಹಿಸಿದ್ದರು.