ಜಿಲ್ಲೆ

20 ರಂದು ಡಾ.ಶಿವರಾತ್ರಿ ರಾಜೇಂದ್ರಶ್ರೀ ಜಯಂತಿ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ: ಕಲ್ಮಳ್ಳಿ ನಟರಾಜು ಮಾಹಿತಿ

ಮೈಸೂರು: ಜೆಎಸ್‌ಎಸ್ ಮಹಾವಿದ್ಯಾಪೀಠದ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ವತಿಯಿಂದ ಡಾ.ಶ್ರೀಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರ ಶತೋತ್ತರ ದಶಮಾನೋತ್ಸವ(110ನೇ ಜಯಂತಿ) ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಜೆಎಸ್‌ಎಸ್ ಬಡಾವಣೆಯ 2ನೇ ಹಂತದಲ್ಲಿ ಸೆ.20ರಂದು ಸಂಜೆ 6 ಗಂಟೆಗೆ ಆಯೋಜಿಸಿದೆ.

ಗದಗದ ಶಿವಾನಂದ ಬೃಹನ್ಮಠದ ಶ್ರೀ ಸದಾಶಿವಾನಂದ ಸ್ವಾಮೀಜಿ ಸಾನ್ನಿಧ್ಯದಲ್ಲಿ ಶಾಸಕ ಜಿ.ಟಿ.ದೇವೇಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜೆಎಸ್‌ಎಸ್ ಎಂವಿಪಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಕೆ.ಗಂಗಾಧರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಉದ್ಯಮಿ ನಿಶಾಂತ್, ಸಂಘದ ಉಪಾಧ್ಯಕ್ಷ ಆರ್.ಎಸ್.ನಂಜುಂಡಸ್ವಾಮಿ ಭಾಗವಹಿಸಲಿದ್ದಾರೆ.

ಇದಕ್ಕೂ ಮೊದಲು ಮಧ್ಯಾಹ್ನ 2.30ಕ್ಕೆ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಡಾ.ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರ ಪುತ್ಥಳಿಯನ್ನು ತೆರೆದ ಅಲಂಕೃತ ವಾಹನದಲ್ಲಿ ಮೆರವಣಿಗೆ ಮೂಲಕ ಕಾರ್ಯಕ್ರಮದ ಮುಖ್ಯ ವೇದಿಕೆಗೆ ತರಲಾಗುತ್ತದೆ. ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾತಂಡಗಳು ಭಾಗಿಯಾಗಲಿವೆ. ವೇದಿಕೆ ಕಾರ್ಯಕ್ರಮದ ಬಳಿಕ ಪ್ರಸಾದದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸಂಘದ ನಿರ್ದೇಶಕ ಕಲ್ಮಳ್ಳಿ ನಟರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆ.20ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೆ ಜೆಎಸ್‌ಎಸ್ ಆಸ್ಪತ್ರೆಯ ಸಹಯೋಗದಲ್ಲಿ ಜೆಎಸ್‌ಎಸ್ ಬಡಾವಣೆಯ 2ನೇ ಹಂತದ ಶ್ರೀನಿಕ ಫಂಕ್ಷನ್ ಹಾಲ್‌ನಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ಕಲ್ಮಳ್ಳಿ ನಟರಾಜು ತಿಳಿಸಿದ್ದಾರೆ.