ಜಿಲ್ಲೆ

ಕಲ್ಲುಗುಂಡಿಯಲ್ಲಿ ಚರಂಡಿ ಸ್ಲ್ಯಾಬ್ ಕುಸಿತ

ಸೌಮ್ಯ ಆರ್

ಸುಳ್ಯ: ಕಲ್ಲುಗುಂಡಿ ಪೇಟೆಯ ಮುಖ್ಯರಸ್ತೆಯ ಕೆಲವು ಕಡೆಗಳಲ್ಲಿ ಚರಂಡಿಯ ಸ್ಲ್ಯಾಬ್ ಮುರಿದು ಬಿದ್ದಿದ್ದು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ನಡೆದಾಡಲು ಸಂಕಷ್ಟಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕುಸಿದು ಅನೇಕ ತಿಂಗಳೇ ಆಗಿದ್ದರೂ ಸಂಬಂಧಪಟ್ಟವರು ಇತ್ತ ಗಮನ ಹರಿಸುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಮುಂದಿನ ಎರಡು ದಿನಗಳಲ್ಲಿ ಕಲ್ಲುಗುಂಡಿ ಪ್ರದೇಶದಲ್ಲಿ ಒತ್ತೆಕೋಲ ಕಾರ್ಯಕ್ರಮ ನಡೆಯಲಿದ್ದು ಸಾರ್ವಜನಿಕರ ನಡೆದಾಟ ಈ ರಸ್ತೆಯಲ್ಲಿ ಹೆಚ್ಚಾಗಿ ಇರುತ್ತದೆ. ಆದುದರಿಂದ ಕುಸಿದ ಕಲ್ಲು ಚಪ್ಪಡಿಗಳನ್ನು ಮರು ಜೋಡಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.