ಜಿಲ್ಲೆ

ಮಾರಮ್ಮ ತಾಯಿಯ ಹಬ್ಬ: ಮಾ.7ರಂದು ಪಣಕನಹಳ್ಳಿಯಲ್ಲಿ ನಾಟಕ ಪ್ರದರ್ಶನ

ಕೆ.ಎನ್.ರಾಘವೇಂದ್ರ

ಮಂಡ್ಯ: ತಾಲೂಕಿನ ಪಣಕನಹಳ್ಳಿ ಗ್ರಾಮದಲ್ಲಿ ಮಾರಮ್ಮ ತಾಯಿ ಹಬ್ಬದ ಅಂಗವಾಗಿ ಮಾ.7ರಂದು ರಾತ್ರಿ 7ಗಂಟೆಗೆ ಕಾಲಭೈರವೇಶ್ವರ ದೇವಸ್ಥಾನದ ಆವರಣದಲ್ಲಿ ಭೈರವೇಶ್ವರ ಕೃಪಾ ಪೋಷಿತ ನಾಟಕ ಮಂಡಳಿಯಿಂದ ಹತ್ತೂರು ಮನೆತನ ನಾಟಕ ಪ್ರದರ್ಶನ ಆಯೋಜಿಸಲಾಗಿದೆ.

ವೇದಿಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ರವಿಕುಮಾರ್ ಗಣಿಗ ವಹಿಸಲಿದ್ದು, ಮನ್‌ಮುಲ್ ಮಾಜಿ ಅಧ್ಯಕ್ಷ ಬಿ.ಆರ್.ರಾಮಚಂದ್ರು ಉದ್ಘಾಟಿಸಲಿದ್ದಾರೆಂದು ಪ್ರಕಟಣೆ ತಿಳಿಸಿದೆ.