ಧಾರವಾಡ: ಇಲ್ಲಿನ ರಂಗಾಯಣದ ಪಂ. ಬಸವರಾಜ ರಾಜಗುರು ಬಯಲು ರಂಗ ಮಂದಿರದಲ್ಲಿ ರಾಷ್ಟ್ರೀಯ ಐಕ್ಯತಾ ಸಪ್ತಾಹ ನಿಮಿತ್ತ ನ. 23ರಂದು ಸಂಜೆ 6.30ಕ್ಕೆ ಮೋಳಿಗೆ ಮಾರಯ್ಯ ನಾಟಕ ಪ್ರದರ್ಶನ ಏರ್ಪಡಿಸಲಾಗಿದೆ.
ತಹಸೀಲ್ದಾರ ಡಾ.ಡಿ.ಎಚ್ ಹೂಗಾರ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ. ರಂಗಾಯಣ ನಿರ್ದೇಶಕ ಡಾ. ರಾಜು ತಾಳಿಕೋಟಿ ಅಧ್ಯಕ್ಷತೆ ವಹಿಸಲಿದ್ದಾರೆ. ನಂತರ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಾಣೇಹಳ್ಳಿ ಅವರ ರಚನೆಯ ಮೋಳಿಗೆ ಮಾರಯ್ಯ ನಾಟಕವನ್ನು ಸಿರಿಗೇರಿ ಧಾತ್ರಿ ರಂಗಸಂಸ್ಥೆ ತಂಡ ಪ್ರಸ್ತುತಪಡಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.