ಕಾನಹೊಸಹಳ್ಳಿ ಸಮೀಪದ ನರಸಿಂಹನಗಿರಿಯಲ್ಲಿ ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಭೂಮಿಪೂಜೆ ನೆರವೇರಿಸಿದರು. ಪಪಂ ಅಧ್ಯಕ್ಷ ಕಾವಲಿ ಶಿವಪ್ಪನಾಯಕ, ಗ್ರಾಪಂ ಅಧ್ಯಕ್ಷೆ ಸಣ್ಣೋಬಮ್ಮ, ಮಾಜಿ ತಾಪಂ ಸದಸ್ಯ ಎನ್.ಪಿ.ಮಂಜುನಾಥ, ವೆಂಕಟೇಶ್, ಎಸ್.ವಿ.ತಮ್ಮಣ್ಣ, ಗುತ್ತಿಗೆದಾರ ವೆಂಕಟೇಶ್ ಯಾದವ್, ಪಿಡಬ್ಲ್ಯುಡಿ ಎಇಇ ನಾಗನಗೌಡ, ಸಣ್ಣ ನೀರಾವರಿ ಇಲಾಖೆ ಎಇಇ ಜವಳಿ ಮಂಜುನಾಥ ಇತರರಿದ್ದರು. 
ಜಿಲ್ಲೆ

ಕುಡಿವ ನೀರಿನ ಸಮಸ್ಯೆಯಾಗದಿರಲಿ

ರುದ್ರಪ್ಪ ವಾಲಿ

ಕಾನಹೊಸಹಳ್ಳಿ: ಕೂಡ್ಲಿಗಿ ತಾಲೂಕು ಬಯಲುಸೀಮೆಯಾಗಿದ್ದು, ಮಳೆ ನೀರು ಸಂಗ್ರಹಿಸುವ ಮೂಲಕ ಅಂತರ್ಜಲ ವೃದ್ಧಿಗೆ ಪೂರಕ ಯೋಜನೆ ಜಾರಿಗೊಳಿಸಲಾಗುವುದು ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ತಿಳಿಸಿದರು.

ಕಾನಹೊಸಹಳ್ಳಿ ಸಮೀಪದ ನರಸಿಂಹನಗಿರಿ ಗ್ರಾಮದಲ್ಲಿ ಶನಿವಾರ ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿ ಮಾತನಾಡಿದರು. ತಾಲೂಕಿನಲ್ಲಿ ಪ್ರತಿ ವರ್ಷ ಅಲ್ಪ ಮಳೆಯಾಗುತ್ತಿದ್ದು, ಮಳೆನೀರನ್ನು ಸಂಗ್ರಹಿಸುವ ನಿಟ್ಟಿನಲ್ಲಿ ಹಳ್ಳಗಳಿಗೆ ಅಡ್ಡಲಾಗಿ ಬೃಹತ್ ಚೆಕ್ ಡ್ಯಾಂ ನಿರ್ಮಿಸುವ ಕೆಲಸ ತ್ವರಿತ ಮಾಡಬೇಕಿದೆ. ತಾಲೂಕಿನ 74 ಕೆರೆಗಳಿಗೆ ನೀರುತುಂಬಿಸುವ ಯೋಜನೆ ಪೂರ್ಣಗೊಳ್ಳುವ ಹಂತದಲ್ಲಿದೆ. ಜತೆಗೆ ಕಾಡಂಚಿನ ಪ್ರದೇಶದಲ್ಲಿ ಚೆಕ್ ಡ್ಯಾಂ ನಿರ್ಮಿಸುವ ಮೂಲಕ ಜಾನುವಾರುಗಳಿಗೆ ಮತ್ತು ವನ್ಯಜೀವಿಗಳಿಗೆ ಕುಡಿವ ನೀರಿನ ಕೊರತೆಯಾಗದಂತೆ ಕ್ರಮ ವಹಿಸಲಾಗುವುದು.

ಗ್ರಾಮಗಳಲ್ಲಿ ಕುಡಿವ ನೀರಿನ ಸಮಸ್ಯೆ ನೀಗಿಸಲು ಅನುಕೂಲವಾಗುವಂತೆ ಕಾಮಗಾರಿ ಕೈಗೊಳ್ಳಲಾಗುವುದು. ಹಳ್ಳಿ ಪರಿಸರವನ್ನು ಮಾಲಿನ್ಯ ಮುಕ್ತವಾಗಿಸುವ ನಿಟ್ಟಿನಲ್ಲಿ ಕ್ಷೇತ್ರದ ಪ್ರತಿಗ್ರಾಮದಲ್ಲಿ ಸೂಕ್ತ ಒಳಚರಂಡಿ ಮತ್ತು ಸಿಸಿ ರಸ್ತೆ ನಿರ್ಮಿಸುವ ಉದ್ದೇಶವಿದೆ. ಈಗಾಲೇ ಬಹುತೇಕ ಗ್ರಾಮಗಳಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದರು.