ಜಿಲ್ಲೆ

ಸೀಮಿತ ವೇಗದಲ್ಲಿ ವಾಹನ ಚಲಾಯಿಸಿ

Haveri

ಹಾವೇರಿ: ಒತ್ತಡದಲ್ಲಿ ವೇಗವಾಗಿ ವಾಹನ ಚಲಾಯಿಸುವುದು ಅಪಘಾತಕ್ಕೆ ಆಹ್ವಾನ ನೀಡಿದಂತಾಗುತ್ತದೆ. ಆದ್ದರಿಂದ ಚಾಲಕರು ಸಂಚಾರ ನಿಯಮ ಉಲ್ಲಂಘಿಸದೇ ಸೀಮಿತ ವೇಗದಲ್ಲಿ ವಾಹನ ಚಲಾಯಿಸಬೇಕು ಎಂದು ಡಿವೈಎಸ್​ಪಿ ಎಂ.ಎಸ್. ಪಾಟೀಲ ಹೇಳಿದರು.

ನಗರದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾವೇರಿ ವಿಭಾಗೀಯ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಅಪಘಾತ ರಹಿತ ಚಾಲನಾ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಚಾಲಕರು ವಾಹನ ಚಾಲನೆಯಲ್ಲಿ ನಿರ್ಲಕ್ಷ್ಯಹಿಸದೇ ಅಪಘಾತಗಳು ಸಂಭವಿಸದಂತೆ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.

ವಿಭಾಗೀಯ ಸಂಚಾರ ಅಧಿಕಾರಿ ಅಶೋಕ ಪಾಟೀಲ ಮಾತನಾಡಿ, ರಸ್ತೆ ಸುರಕ್ಷತೆಯ ಕುರಿತು ಚಾಲಕರಿಗೆ ಎಲ್ಲ ರೀತಿಯ ತರಬೇತಿ, ಸಲಹೆ ನೀಡಲಾಗುತ್ತಿದೆ. ಅಪಘಾತರಹಿತ ಚಾಲನೆಯ ಅನೇಕ ಕಾರ್ಯಾಗಾರವನ್ನು ಚಾಲಕರು, ನಿರ್ವಾಹಕರಿಗೆ ಹಮ್ಮಿಕೊಳ್ಳಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಈ ಕಾರ್ಯಗಾರವನ್ನು ಪ್ರತಿ 15 ದಿನಕ್ಕೊಮ್ಮೆ ಆಯೋಜಿಸಲಾಗುವುದು ಎಂದರು.

ಕಳೆದ ನಾಲ್ಕು ತಿಂಗಳಿನಲ್ಲಿ ಹಾವೇರಿ ವಿಭಾಗದಲ್ಲಿ ಸಂಭವಿಸಿದ ವಿವಿಧ ಅಪಘಾತಕ್ಕೆ 2.50 ಕೋಟಿ ರೂ. ಪರಿಹಾರ ನೀಡಿದ್ದು, ಸಂಸ್ಥೆಗೆ ಆರ್ಥಿಕ ಹೊರೆ ಬಿದ್ದಿದೆ. ಚಾಲಕರು ಸಮಚಿತ್ತದಿಂದ ಜಾಗ್ರತರಾಗಿ ವಾಹನ ಚಲಾಯಿಸಬೇಕು. ಬಸ್​ನಲ್ಲಿ ಪ್ರಯಾಣಿಕರಿಗೆ ಸಿಬ್ಬಂದಿ ಸರಿಯಾದ ರೀತಿಯಲ್ಲಿ ಸ್ಪಂದಿಸಬೇಕು. ಹಾಳಾಗಿರುವ ರಸ್ತೆ ಕಂಡುಬಂದಲ್ಲಿ ನಿಧಾನಗತಿಯಲ್ಲಿ ವಾಹನ ಚಲಾಯಿಸಬೇಕು.| ಮಹದೇವ ಮುಂಜಿ, ಉಪಮುಖ್ಯ ಅಂಕಿ ಸಂಖ್ಯಾಧಿಕಾರಿ