ಸಿಂಧನೂರು: ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಅನುಸರಿಸುವ ಮೂಲಕ ಅಪಘಾತಗಳನ್ನು ತಪ್ಪಿಸಬೇಕೆಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ವಿನಯಾ ಕಾಟೋಕರ್ ಹೇಳಿದರು.
ನಗರದ ಸರ್ಕಾರಿ ಮಹಾವಿದ್ಯಾಲಯದಲ್ಲಿ ಪ್ರಾದೇಶಿಕ ಸಾರಿಗೆ ಕಚೇರಿಯಿಂದ ಆಯೋಜಿಸಿದ್ದ ರಸ್ತೆ ಸುರಕ್ಷತಾ ಕಾರ್ಯಕ್ರಮದಲ್ಲಿ ಮಂಗಳವಾರ ಮಾತನಾಡಿದರು.
ವಾಹನಗಳನ್ನು ಓಡಿಸುವಾಗ ಜಾಗ್ರತೆ ಅಗತ್ಯವಾಗಿದೆ. ವೇಗದ ಇತಿ, ಮಿತಿ ತಿಳಿದುಕೊಳ್ಳಬೇಕು. ಕಾರು ಚಲಾಯಿಸುವಾಗ ಕಡ್ಡಾಯವಾಗಿ ಸೀಟ್ ಬೆಲ್ಟ್ ಧರಿಸಬೇಕು. ಟ್ರಾಫಿಕ್ ಸಿಗ್ನಲ್‌ನಲ್ಲಿ ನಿಯಮ ಪಾಲನೆ ಮಾಡಬೇಕು ಎಂದರು. ಡಿವೈಎಸ್‌ಪಿ ಬಿ.ಎಸ್.ತಳವಾರ, ಪ್ರಮುಖರಾದ ಯಲ್ಲಪ್ಪ, ಪ್ರಹ್ಲಾದಗುಡಿ, ಅಮರೇಶ, ಮಲ್ಲಯ್ಯಸ್ವಾಮಿ ಇದ್ದರು.