ರಸ್ತೆ ಡಾಂಬರೀಕರಣಕ್ಕೆ ಚಾಲನೆ  
ಜಿಲ್ಲೆ

ಉತ್ತಮ ರಸ್ತೆಗಳಿಂದ ಹಳ್ಳಿಗಳ ಪ್ರಗತಿ

ಶಿವರಾಜ.ಎಂ

ವಿಜಯವಾಣಿ ಸುದ್ದಿಜಾಲ ನೆಲಮಂಗಲ
ಉತ್ತಮ ರಸ್ತೆಗಳಿಂದ ಗ್ರಾಮೀಣ ಪ್ರದೇಶದ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ನಗರಸಭೆ ಹೆಚ್ಚು ವರಿ ಸದಸ್ಯ ಅಂಜನಮೂರ್ತಿ ತಿಳಿಸಿದರು.
ನಗರದ ವಿಶ್ವಶಾಂತಿನಗದಲ್ಲಿ ನಗರಸಭೆ 15ನೇ ಹಣಕಾಸು ಯೋಜನೆ ಅನುದಾನದಲ್ಲಿ ನಿರ್ಮಾಣ ಮಾಡುತ್ತಿರುವ ರಸ್ತೆ ಡಾಂಬರೀಕರಣಕ್ಕೆ ಚಾಲನೆ ನೀಡಿ, ಮಾತನಾಡಿದರು.
ನಗರಸಭೆ ವ್ಯಾಪ್ತಿಯ ಭಕ್ತನಪಾಳ್ಯಕ್ಕೆ ರಸ್ತೆ ಸಂಪರ್ಕ ಕಲ್ಪಿಸುವ ವಿಶ್ವಶಾಂತಿ ನಗರದ ರಸ್ತೆ ಹಾಳಾಗಿ, ಸಾಕಷ್ಟು ವರ್ಷಗಳಿಂದ ಈ ಭಾಗದ ಜನರು ಸಂಕಷ್ಟ ಎದುರಿಸುತ್ತಿದ್ದರು. 2023-24ನೇ ಸಾಲಿನ ನಗರಸಭೆ 15ನೇ ಹಣಕಾಸು ಯೋಜನೆ ಅನುದಾನ ಸುಮಾರು 18 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಮಾಡಲಾಗುತ್ತಿದೆ ಎಂದರು.
ವಾಜರಹಳ್ಳಿ ಗ್ರಾಪಂ ನಗರಸಭೆಗೆ ಮೀಲಿನಗೊಂಡ ಬಳಿಕ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ಭಾಗದ ಜನರಿಗೆ ಕುಡಿಯುವ ನೀರು ಸೇರಿ ಅಗತ್ಯ ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ನಿತ್ಯ ಶ್ರಮಿಲಾಗುತ್ತಿದೆ. ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಬಾಕಿ ಇದ್ದು, ಹಂತ ಹಂತವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದರು.
ಪ್ರತಿಯೊಬ್ಬರೂ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ನಗರಸಭೆಯೊಂದಿಗೆ ಕೈಜೋಡಿಸಬೇಕು. ಸಾರ್ವಜನಿಕರು ಸಮಸ್ಯೆಯನ್ನು ಮುಕ್ತವಾಗಿ ಜನಪ್ರತಿನಿಧಿಗಳ ಗಮನಕ್ಕೆ ತಂದರೆ ಪರಿಹಾರ ದೊರಕಿಸಿಕೊಡಲು ಸಾಧ್ಯ ಎಂದರು.