ಜಿಲ್ಲೆ

ಮರಕ್ಕೆ ಕಾರು ಡಿಕ್ಕಿಯಾಗಿ ಚಾಲಕ ಸಾವು

ಮಾದೇಶ್ ತಿ.ನರಸೀಪುರ

ಗೋಣಿಕೊಪ್ಪಲು: ಚೆನ್ನಂಗೊಲ್ಲಿಯಲ್ಲಿ ಶುಕ್ರವಾರ ಇನ್ನೋವಾ ಕಾರು ಮರಕ್ಕೆ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಸಾವಿಗೀಡಾಗಿ ಐವರು ಗಾಯಗೊಂಡಿದ್ದಾರೆ.

ಬೆಂಗಳೂರು ಮೂಲದ ದೀಪಕ್(35) ಮೃತಪಟ್ಟ ಚಾಲಕ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದ ಮೂವರಿಗೆ ಸ್ಥಳೀಯವಾಗಿ ಚಿಕಿತ್ಸೆ ನೀಡಲಾಗಿದೆ.

ಮೈಸೂರಿನಿಂದ ವಿರಾಜಪೇಟೆಗೆ ಬರುತ್ತಿದ್ದ ಇನ್ನೋವಾ ಕಾರು ತಿತಿಮತಿ-ಗೋಣಿಕೊಪ್ಪಲು ಮುಖ್ಯರಸ್ತೆಯ ಚೆನ್ನಂಗೊಲ್ಲಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕಾರಿನಲ್ಲಿ ಚಾಲಕ ಸೇರಿದಂತೆ 6 ಜನರು ಪ್ರಯಾಣಿಸುತ್ತಿದ್ದರು. ಸ್ಥಳಕ್ಕೆ ಗೋಣಿಕೊಪ್ಪಲು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.