Drone Camera Photography & Videography Training: Application Invited 
ಜಿಲ್ಲೆ

ಡ್ರೋನ್​ ಕ್ಯಾಮೆರಾ ಫೋಟೋಗ್ರಫಿ&ವಿಡಿಯೋಗ್ರಫಿ ತರಬೇತಿ: ಅರ್ಜಿ ಆಹ್ವಾನ

ಗಿರೀಶ ಸಗರ

ವಿಜಯಪುರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಡ್ರೋನ್​ ಕ್ಯಾಮೆರಾ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಂಗಡದ ಯುವಕ&ಯುವತಿಯರಿಗೆ ತರಬೇತಿ ನೀಡಲಾಗುತ್ತಿದ್ದು, ಆಸಕ್ತ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಪಂಗಡಕ್ಕೆ ಸೇರಿದ ಎಸ್​ಎಸ್​ಎಲ್​ಸಿ ಉತ್ತೀರ್ಣರಾದ 35 ರಿಂದ 40 ವರ್ಷ ವಯೋಮಾನದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ನಿಗದಿತ ಅರ್ಜಿ ನಮೂನೆ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಾಗೂ ತಾಲೂಕು ಸಮಾಜ ಕಲ್ಯಾಣ ಇಲಾಖೆ ಕಚೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.