ಜಿಲ್ಲೆ

ಮಾದಕ ವ್ಯಸನ ಯುವಜನತೆ ಕಾಡುವ ದೊಡ್ಡ ಪಿಡುಗು

ಶಂಕರನಾರಾಯಣ: ಮಾದಕ ದ್ರವ್ಯ ಸೇವನೆ ವ್ಯಕ್ತಿಯ ಆರೋಗ್ಯ ಮತ್ತು ಜೀವನದ ಮೇಲೆ ದುಷ್ಪರಿಣಾಮ ಬೀರುತ್ತದೆ. ಅಂತಹ ಕೃತ್ಯಗಳಲ್ಲಿ ತೊಡಗಿಸಿಕೊಂಡವರಿಗೆ ಕಾನೂನಿನ ಅನ್ವಯ ವಿವಿಧ ಶಿಕ್ಷೆಗಳನ್ನು ನೀಡಲಾಗುತ್ತದೆ. ಮಾದಕ ದ್ರವ್ಯ ವ್ಯಸನವನ್ನು ತಡೆಗಟ್ಟುವಲ್ಲಿ ವಿದ್ಯಾರ್ಥಿಗಳ ಸಾವಾಜಿಕ ಜವಾಬ್ದಾರಿ ಬಹಳ ದೊಡ್ಡದು ಎಂದು ಶಂಕರನಾರಾಯಣ ಪೊಲೀಸ್ ಠಾಣೆ ಉಪನಿರೀಕ್ಷಕ ಶಂಭುಲಿಂಗಯ್ಯ.ಎಂ.ಇ. ಹೇಳಿದರು.

ಶಂಕರನಾರಾಯಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಆಂತರಿಕ ಗುಣಮಟ್ಟ ಭರವಸೆ ಕೋಶ, ವಾದಕ ದ್ರವ್ಯ ನಿರ್ಮೂಲನಾ ಸಮಿತಿ ಮತ್ತು ಸ್ನಾತಕೋತ್ತರ ವಾಣಿಜ್ಯಶಾಸ ವಿಭಾಗದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಾದಕ ವಸ್ತು ವಿರೋಧಿ ದಿನದ ಕಾರ್ಯಕ್ರಮದಲ್ಲಿ ವಾತನಾಡಿದರು. ಪ್ರಾಂಶುಪಾಲ ಡಾ. ವೆಂಕಟರಾಮ್ ಭಟ್ ಅಧ್ಯಕ್ಷತೆ ವಹಿಸಿದರು. ಐಕ್ಯೂಎಸಿ ಸಂಚಾಲಕ ಡಾ.ವಸಂತ್ ಜಿ. ಉಪಸ್ಥಿತರಿದ್ದರು. ಸ್ನಾತಕೋತ್ತರ ವಿಭಾಗದ ಸಂಯೋಜಕಿ ಪ್ರಜ್ಞಾ ನಿರೂಪಿಸಿದರು.