?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????? 
ಜಿಲ್ಲೆ

ಮಾದಕ ವಸ್ತುಗಳ ಸೇವನೆಯಿಂದ ದುಷ್ಪರಿಣಾಮ

ಅಶೋಕ್ ಕುಮಾರ್ ಎನ್

ದೇವದುರ್ಗ: ಮಾದಕ ವಸ್ತುಗಳ ವ್ಯಸನ ಮಾನಸಿಕ ಕಾಯಿಲೆಯಾಗಿದ್ದು, ಇದರ ವಿರುದ್ಧ ಯುವಜನರಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದೆ. ಯುವ ಜನತೆ ಫ್ಯಾಷನ್ ಹೆಸರಿನಲ್ಲಿ ದುಶ್ಚಟಗಳಿಗೆ ಬಲಿಯಾಗಬಾರದು ಎಂದು ಪ್ರಾಚಾರ್ಯೆ ಡಾ.ಫಾತಿಮಾ ಹಸ್ನಾ ಬೇಗಂ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳಸಾಗಣೆ ವಿರೋಧಿ ದಿನಾಚರಣೆಯಲ್ಲಿ ಬುಧವಾರ ಮಾತನಾಡಿದರು. ಮಾದಕ ವಸ್ತುಗಳ ಸೇವನೆಯಿಂದ ಮಾನಸಿಕ, ದೈಹಿಕ ಹಾಗೂ ಸಾಮಾಜಿಕವಾಗಿ ವ್ಯಕ್ತಿಯ ಮೇಲೆ ದುಷ್ಪರಿಣಾಮಗಳು ಉಂಟಾಗುತ್ತವೆ. ಮದ್ಯ, ತಂಬಾಕು, ಬೀಡಿ, ಸಿಗರೇಟ್, ಗುಟ್ಖಾ, ಗಾಂಜಾ, ಅಫೀಮು, ನೋವು ನಿವಾರಕ ಹಾಗೂ ನಿದ್ರಾಜನಕ ಮಾತ್ರೆಗಳು ಮಾದಕ ವಸ್ತುಗಳಾಗಿವೆ. ಯುವಕರು ಇಂಥ ಚಟಗಳಿಂದ ದೂರವಿರಬೇಕು ಎಂದರು.

ಆರೋಗ್ಯ ಇಲಾಖೆಯ ಬಿಎಚ್‌ಇಒ ಗೀತಾ ಮಾತನಾಡಿ, ಮಾದಕ ವಸ್ತುಗಳ ವ್ಯಸನ ಯುವಜನತೆ ಮೇಲೆ ಪರಿಣಾಮ ಬೀರುತ್ತಿದೆ. ಸಂತೋಷ, ಗೆಳೆಯರ ಒತ್ತಡ, ನೋವು ನಿವಾರಣೆ ನೆಪ, ಆಧುನಿಕ ಜೀವನ ಶೈಲಿ ಅನುಕರುಣೆ ಮಾಡಲು ವ್ಯಸನಕ್ಕೆ ತುತ್ತಾಗುತ್ತಾರೆ. ಇದರಿಂದ ಹಿಂಸಾತ್ಮಕ ನಡವಳಿಕೆ, ಉದ್ಯೋಗ ಮತ್ತು ಕೌಟುಂಬಿಕ ಸಮಸ್ಯೆಗಳು, ಆತ್ಮಹತ್ಯೆ, ಕಾನೂನು ಬಾಹಿರ ಕೃತ್ಯಗಳು, ದೈಹಿಕ, ಮಾನಸಿಕ ಕಾಯಿಲೆಗಳು, ಲೈಂಗಿಕ ರೋಗಗಳು, ಗರ್ಭಪಾತ, ರಸ್ತೆ ಅಪಘಾತಗಳು ಸಂಭವಿಸುತ್ತವೆ. ಹೀಗಾಗಿ ಯುವಕರು ಇಂಥ ವಸ್ತುಗಳಿಂದ ದೂರವಿರಬೇಕು. ಹೆಚ್ಚಿನ ಮಾಹಿತಿಗಾಗಿ ಉಚಿತ ಸಹಾಯವಾಣಿ 14416 ಸಂಖ್ಯೆಗೆ ಕರೆ ಮಾಡಬಹುದು ಎಂದರು.

ಉಪನ್ಯಾಸಕರಾದ ಹನುಮಂತ ಜಗ್ಲಿ, ಡಾ.ಮಲ್ಲಯ್ಯ ಅತ್ತನೂರು, ಡಾ.ಅನಂತ, ಶಶಿಧರ್, ಶೈಲಜಾ, ಶ್ರೀದೇವಿ, ಗೌರಮ್ಮ, ನರಸಪ್ಪ ಪಾಟೀಲ್ ಆರೋಗ್ಯ ಇಲಾಖೆ ಸಿಬ್ಬಂದಿ ಜಯಲಕ್ಷ್ಮೀ ವಾದಿರಾಜ್, ರೇಣುಕಾ ಇತರರಿದ್ದರು.