ಜಿಲ್ಲೆ

ಮಾದಕ ವ್ಯಸನವು ಸಮಾಜಕ್ಕೆ ಮಾರಕ

Kopala - Desk - Eraveni

ಕುಕನೂರು: ಮಾದಕ ವ್ಯಸನವು ಸಮಾಜಕ್ಕೆ ಮಾರಕವಾಗಿದ್ದು, ಇದನ್ನು ತಡೆಯಲು ಪ್ರತಿಯೊಬ್ಬರೂ ಜಾಗೃತರಾಗಬೇಕು ಎಂದು ಕೊಪ್ಪಳ ವಿವಿಯ ಕುಲಪತಿ ಪ್ರೊ. ಬಿ.ಕೆ. ರವಿ ಹೇಳಿದರು.

ತಾಲೂಕಿನ ತಳಕಲ್ ಗ್ರಾಮದ ಇಂಜಿನಿಯರ್ ಕಾಲೇಜು ಆವರಣದಲ್ಲಿರುವ ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಸಾಮೂಹಿಕ ಜಾಗೃತಿ ಮೂಡಿಸುವ ಹಾಗೂ ನಶಾಮುಕ್ತ ಭಾರತ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಾದಕ ವ್ಯಸನ ಕೇವಲ ವ್ಯಕ್ತಿ ಜೀವನವನ್ನೇ ಅಲ್ಲ, ಕುಟುಂಬ ಮತ್ತು ಸಮಾಜದ ಸ್ಥಿರತೆ ಹಾಳು ಮಾಡುತ್ತದೆ. ವಿದ್ಯಾರ್ಥಿ ಜೀವನದಲ್ಲೇ ಜಾಗೃತಿ ಹೊಂದಿ, ಸ್ವಸ್ಥ ಹಾಗೂ ನೈತಿಕ ಜೀವನವನ್ನು ನಡೆಸುವುದು ನಮ್ಮೆಲ್ಲರ ಹೊಣೆಗಾರಿಕೆ ಎಂದರು. ವಿವಿ ಆಡಳಿತಾಧಿಕಾರಿ ತಿಮ್ಮಾರೆಡ್ಡಿ ಮೇಟಿ, ವಿವಿಧ ವಿಭಾಗಗಳ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.