ಜಿಲ್ಲೆ

ಮಾದಕ ವಸ್ತು ಎಂಡಿಎಂಎ ಹೊಂದಿದ್ದ ಇನ್ನೋರ್ವ ಸೆರೆ

ಮಂಗಳೂರು: ನಗರದ ಹೊರ ವಲಯದ ಮುಡಿಪು ಕಂಬಳ ಪದವು ಕೆಐಡಿಬಿ ರಸ್ತೆ ಪರಿಸರದಲ್ಲಿ ಮಾದಕ ವಸ್ತು ಎಂಡಿಎಂ ಕಾರಿನಲ್ಲಿ ಇಟ್ಟು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾತನನ್ನು ಮಂಗಳೂರು ಅಪರಾಧ ಪತ್ತೆದಳ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.


ಉಳ್ಳಾಲ ಬೋಳಿಯಾರ್ ನಲಿಕೆದ ಗುಡ್ಡೆ ಮನೆ ನಿವಾಸಿ ಮಹಮ್ಮದ್ ಆರೀಫ್ (28) ಬಂಧಿತ. ಆತನಿಂದ ಒಟ್ಟು 25 ಗ್ರಾಂ ತೂಕದ 1,25,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮಾರುತಿ ಅಲ್ಟೋ 800 ಕಾರು, ಮೊಬೈಲ್ ಫೋನ್ 1, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 6,35,500 ರೂ. ಆಗಬಹುದು. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಮಾದಕ ವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವಾರು ಆರೋಪಿಗಳು ಭಾಗಿಯಾಗಿದ್ದು ಪತ್ತೆ ಕಾರ್ಯ ಮುಂದುವರಿದಿದೆ.


ಆರೋಪಿಯ ವಿರುದ್ಧ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಜಾನುವಾರು ಕಳ್ಳತನ ಪ್ರಕರಣ ದಾಖಲಾಗಿತ್ತು. ಈ ಆರೋಪಿಯ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್‌ಐಯವರಾದ ರಾಜೇಂದ್ರ ಬಿ., ಸುದೀಪ್ ಎಂ. ವಿ, ಶರಣಪ್ಪ ಭಂಡಾರಿ, ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.