ಜಿಲ್ಲೆ

ಮಾದಕ ವಸ್ತು ಮಾರಾಟ ಇಬ್ಬರ ಬಂಧನ ಸಿಸಿಬಿ ಪೊಲೀಸರ ಕಾರ್ಯಾಚರಣೆ

ಮಂಗಳೂರು: ಉಳ್ಳಾಲದ ತಲಪಾಡಿ ಕೆ.ಸಿ.ರೋಡ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಕ್ರಮವಾಗಿ ನಿಷೇಧಿತ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಕೇರಳದ ಇಬ್ಬರು ಆರೋಪಿಗಳನ್ನು ಗುರುವಾರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 95 ಸಾವಿರ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಲಾಗಿದೆ.


ಆರೋಪಿಗಳಾದ ಮಂಜೇಶ್ವರ ಹೊಸಬೆಟ್ಟು ನಿವಾಸಿ ಮುಸ್ತಾಫ(37) ಮತ್ತು ಕುಂಜತ್ತೂರಿನ ಸಂಶುದ್ದೀನ್(38) ಬಂಧಿತರು.


ಇವರಿಂದ 75 ಸಾವಿರ ರು.ಗಳ 15 ಗ್ರಾಂ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಫೋನ್ 2, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 66ರ ಬಳಿ ಸಾರ್ವಜನಿಕರಿಗೆ ಎಂಡಿಎಂಎ ಮಾರಾಟ ಮಾಡುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.


ಪೊಲೀಸ್ ಕಮಿಷನರ್ ಅನುಪಮ್ ಅಗರ್‌ವಾಲ್ ಮಾರ್ಗದರ್ಶನದಲ್ಲಿ ಡಿಸಿಪಿಗಳಾದ ಸಿದ್ಧಾರ್ಥ ಗೋಯಲ್, ದಿನೇಶ್ ಕುಮಾರ್ ನಿರ್ದೇಶನದಲ್ಲಿ ಸಿಸಿಬಿ ಎಸಿಪಿ ಪಿ.ಎ. ಹೆಗಡೆ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.