ಜಿಲ್ಲೆ

ಕುಡಿದ ಮತ್ತಿನಲ್ಲಿ ನೇಣು ಬಿಗಿದುಕೊಂಡು ಸಾವು

ಹಾನಗಲ್ಲ: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಮೃತಪಟ್ಟ ಘಟನೆ ಪಟ್ಟಣದ ಕಂಚಗಾರ ಗಲ್ಲಿಯಲ್ಲಿ ಮಂಗಳವಾರ ನಡೆದಿದೆ.

ರಾಮಸ್ವರೂಪ ಚಿದಿಯಾ (50) ಮೃತ ವ್ಯಕ್ತಿ

ಈತ ಮದ್ಯ ಸೇವಿಸಿದ ಮತ್ತಿನಲ್ಲಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಹಾನಗಲ್ಲ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.