ಉಡುಪಿ: ನಗರಸಭೆಯ ವತಿಯಿಂದ ಡೆಂಘೆ ಮುಂಜಾಗೃತಾ ಕ್ರಮವಾಗಿ ಅಜ್ಜರಕಾಡಿನ ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಡ್ರೈ ಡೇ ಆಚರಿಸಲಾಯಿತು.
ಸುತ್ತಮುತ್ತ ನೀರು ನಿಲ್ಲದಂತೆ ಮುಂಜಾಗೃತೆ ವಹಿಸುವಂತೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಯಿತು. ಸೊಳ್ಳೆಗಳಿಂದ ರಕ್ಷಣೆ ಪಡೆಯಲು ಬೇವಿನ ಎಣ್ಣೆ ಹಚ್ಚುವಂತೆ ಸೂಚಿಸಿ ವಿತರಿಸಲಾಯಿತು. ನಗರಸಭಾ ಪೌರಾಯುಕ್ತ ರಾಯಪ್ಪ, ಪರಿಸರ ಇಂಜಿನಿಯರ್ ಸ್ನೇಹ ಕೆ.ಎಸ್, ಪ್ರಭಾರ ಆರೋಗ್ಯ ನಿರೀಕ್ಷಕ ಸುರೇಂದ್ರ ಹೋಬಳಿದಾರ್, ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಡಾ. ಭಾಸ್ಕರ್ ಶೆಟ್ಟಿ ಎಸ್, ರಾಜ್ಯಶಾಸ್ತ್ರ ವಿಭಾಗದ ಅಸೋಸಿಯೇಟ್ ಪ್ರೊ. ಡಾ.ಮಂಜುನಾಥ, ಸಮಾಜ ಶಾಸ್ತ್ರ ವಿಭಾಗದ ಅಸೋಸಿಯೇಟ್ ಪ್ರೊಫೇಸರ್ ಡಾ. ರಾಜೇಂದ್ರ ಕೆ., ದೈಹಿಕ ಶಿಕ್ಷಣ ನಿರ್ದೇಶಕ ಡಾ. ರಾಮಚಂದ್ರ ಪಾಟ್ಕರ್, ಕಂದಾಯ ಅಧಿಕಾರಿ ಸಂತೋಷ್ ಎಸ್.ಡಿ, ಪ್ರಭಾರ ಆರೋಗ್ಯ ನಿರೀಕ್ಷಕ ಮನೋಹರ್ ಉಪಸ್ಥಿತರಿದ್ದರು. ಬನ್ನಂಜೆಯ ಬಿಸಿಎಂ ವಿದ್ಯಾರ್ಥಿ ನಿಲಯ ಹಾಗೂ ಆದಿಉಡುಪಿಯ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳ ವಸತಿ ನಿಲಯದಲ್ಲಿ ಡ್ರೈ ಡೇ ಆಚರಿಸಲಾಯಿತು.