ಜಿಲ್ಲೆ

ಕ್ರೂಸರ್ ವಾಹನ ಪಲ್ಟಿಯಾಗಿ 4 ಸಾವು?

ಮಂಜುನಾಥ ಕೋಳಿಗುಡ್ಡ

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿದ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ ಹೊಡೆದ ಘಟನೆಯಲ್ಲಿ ನಾಲ್ವರು ಮೃತಪಟ್ಟು 20ಕ್ಕೂ ಹೆಚ್ಚು ಜನ ಗಂಭೀರ ಗಾಯಗೊಂಡಿದ್ದಾರೆ. ಸವದತ್ತಿ ತಾಲೂಕಿನ ಮುನವಳ್ಳಿ ಹೊರವಲಯದಲ್ಲಿ ಬುಧವಾರ ರಾತ್ರಿ ಅಪಘಾತ ಸಂಭವಿಸಿದೆ. ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದ 20ಕ್ಕೂ ಹೆಚ್ಚು ಜನ ಹತ್ತಿ ಬಿಡಿಸುವ ಕೃಷಿ ಕೂಲಿ ಕೆಲಸಕ್ಕೆಂದು ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹೆಬ್ಬಳ್ಳಿ ಗ್ರಾಮಕ್ಕೆ ತೆರಳಿದ್ದರು. ಕೂಲಿ ಕೆಲಸ ಮುಗಿಸಿ ಸ್ವಗ್ರಾಮ ಚುಂಚನೂರಿಗೆ ಬರುವಾಗ ದುರ್ಘಟನೆ ನಡೆದಿದೆ. ಚುಂಚನೂರು ಗ್ರಾಮದ ಕೆಂಚಪ್ಪ ಈರಣ್ಣವರ(50) ಸ್ಥಳದಲ್ಲೇ ಮೃತಪಟ್ಟಿದ್ದರೆ, 16 ವರ್ಷದ ಬಾಲಕ ಬಸಪ್ಪ ಸೇರಿ ಇನ್ನಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಸವದತ್ತಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಸವದತ್ತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.