filter: 0; jpegRotation: 0; fileterIntensity: 0.000000; filterMask: 0; module:1facing:0; hw-remosaic: 0; touch: (-1.0, -1.0); modeInfo: ; sceneMode: Auto; cct_value: 0; AI_Scene: (-1, -1); aec_lux: 104.0; hist255: 0.0; hist252~255: 0.0; hist0~15: 0.0; 
ಜಿಲ್ಲೆ

ಭ್ರಷ್ಟಾಚಾರದಿಂದ ಅಭಿವೃದ್ಧಿ ಕುಂಠಿತ

ಪ್ರಶಾಂತ ಹೂಗಾರ

ಚಿಕ್ಕೋಡಿ: ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆಗೆ ಎಂಬ ಘೋಷ ವಾಕ್ಯದೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿರುವುದರಿಂದ ಕೃಷ್ಣಾ ನದಿ ತೀರದ ಹಲವಾರು ಏತ ನೀರಾವರಿ, ಮಹದಾಯಿ ಯೋಜನೆಗಳು ಅನುಷ್ಠಾನಗೊಂಡಿಲ್ಲ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಲ್ಲೋಳ ಬ್ರಿಡ್ಜ್ ಸೇರಿ ಹಲವು ಕಾಮಗಾರಿಗಳು ನನೆಗುದಿಗೆ ಬಿದ್ದಿವೆ. ಅವುಗಳ ಬಗ್ಗೆ ಸರ್ಕಾರ ಉತ್ತರ ನೀಡಬೇಕು ಎಂದರು.

ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಮಾತನಾಡಿ, ಕಾಂಗ್ರೆಸ್ ಆಡಳಿತ ನಡೆಸುವ ಸರ್ಕಾರವಲ್ಲ, ಕೇವಲ ವಸೂಲಿ ಸರ್ಕಾರ. ಕಾಂಗ್ರೆಸ್ ಆಡಳಿತ ಕನ್ನಡಿಗರ ಬದುಕಿಗೆ ಶಾಪವಾಗಿದೆ. ಜನನದಿಂದ ಮರಣ ಪ್ರಮಾಣಪತ್ರದವರೆಗೂ ಭ್ರಷ್ಟಾಚಾರ ತಾಂಡವಾಡುತ್ತಿದೆ. ಸರ್ಕಾರ ಪ್ರತಿ ಯೋಜನೆ, ಟೆಂಡರ್‌ನಲ್ಲಿ ಶೇ.60 ಕಮಿಷನ್ ದಂಧೆ ನಡೆಸುತ್ತಿದೆ. ರಾಜ್ಯದಲ್ಲಿ ಹಲವಾರು ಹಗರಣ ನಡೆಸಿದೆ ಎಂದು ಆರೋಪಿಸಿದರು.

ವಿಧಾನಸೌಧದದಲ್ಲೆ ಪಾಕ್ ಪರ ಘೋಷಣೆ ಕೂಗಿದ್ದರೂ ಸರ್ಕಾರ ಅದನ್ನು ಮರೆಮಾಚಲು ಪ್ರಯತ್ನಿಸಿದೆ. ಲವ್ ಜಿಹಾದ್, ಹತ್ಯೆ, ಅತ್ಯಾಚಾರ ಮಿತಿ ಮೀರಿವೆ. ಡ್ರಗ್ಸ್ ಮಾಫಿಯಾ ಸಕ್ರಿಯವಾಗಿದೆ. ರಾಜ್ಯದ ಹಣಕಾಸು ಸ್ಥಿತಿ ಸಂಪೂರ್ಣ ಹದಗೆಟ್ಟಿದ್ದು, ಆರ್ಥಿಕ ದಿವಾಳಿ ಅಂಚಿನಲ್ಲಿದೆ ಎಂದು ತಿಳಿಸಿದರು.

ಶಾಸಕ ಡಿ.ಎಂ.ಐಹೊಳೆ, ನಿಖಿಲ ಕತ್ತಿ, ಸಂಜಯಗೌಡ ಪಾಟೀಲ, ಶಾಂಭವಿ ಅಶ್ವತ್ಥಪುರ, ಸತೀಶ ಅಪ್ಪಾಜಿಗೋಳ, ರಾಜು ಹರಗನ್ನವರ, ದುಂಡಪ್ಪ ಬೆಂಡವಾಡೆ, ರಮೇಶ ಕಾಳನ್ನವರ ಇತರರಿದ್ದರು.