ಜಿಲ್ಲೆ

ಆದಿಹಳ್ಳಿ ಮತ್ತು ಅರಸೀಕೆರೆ ನಿಲ್ದಾಣಗಳ ನಡುವೆ ವಿದ್ಯುತ್ ಕಾಮಗಾರಿ ಹಿನ್ನೆಲೆಯಲ್ಲಿ ರೈಲು ಸೇವೆಯ ಸಮಯ ವ್ಯತ್ಯಾಯ

ಮೈಸೂರು: ನೈಋತ್ಯ ರೈಲ್ವೆ ಮೈಸೂರು ವಿಭಾಗದ ಆದಿಹಳ್ಳಿ ಮತ್ತು ಅರಸೀಕೆರೆ ನಿಲ್ದಾಣಗಳ ನಡುವೆ ವಿದ್ಯುತ್ ಕಾಮಗಾರಿ ಹಿನ್ನೆಲೆಯಲ್ಲಿ ಸೆ.8 ಮತ್ತು 9 ರಂದು ಕೆಲ ರೈಲುಗಳ ಸಂಚಾರದ ಸಮಯ ವ್ಯತ್ಯಾಯ ಆಗಲಿದೆ.

ಸೆ. 8 ರಂದು ತಿರುನಲ್ವೇಲಿಯಿಂದ ಹೊರಡುವ ರೈಲು ಸಂಖ್ಯೆ 11022 ತಿರುನಲ್ವೇಲಿ ದಾದರ್ ಎಕ್ಸ್‌ಪ್ರೆಸ್ ರೈಲು ಮಾರ್ಗದಲ್ಲಿ 45 ನಿಮಿಷಗಳ ಕಾಲ ತಡವಾಗಲಿದೆ.

ಸೆ. 9 ರಂದು ರೈಲು ಸಂಖ್ಯೆ 12079 ಕೆಎಸ್‌ಆರ್ ಬೆಂಗಳೂರು ಎಸ್‌ಎಸ್‌ಎಸ್ ಹುಬ್ಬಳ್ಳಿ ಜನ ಶತಾಬ್ದಿ ಎಕ್ಸ್‌ಪ್ರೆಸ್ ಮತ್ತು ರೈಲು ಸಂಖ್ಯೆ 56519 ಕೆಎಸ್‌ಆರ್ ಬೆಂಗಳೂರು ಹೊಸಪೇಟೆ ಪ್ಯಾಸೆಂಜರ್ ರೈಲುಗಳು ತಲಾ 70 ನಿಮಿಷಗಳ ಕಾಲ ವಿಳಂಬವಾಗಿ ಸಂಚರಿಸಲಿವೆ ಎಂದು ವಿಭಾಗೀಯ ಹಣಕಾಸು ವ್ಯವಸ್ಥಾಪಕರ ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಪೃಥ್ವಿ ಎಸ್ ಹುಲ್ಲತ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.