ಕುಮಟಾ: ಮಿರ್ಜಾನದ ಮಹಾಸತಿ ಭೈರವಿ ದೇವಾಲಯದಲ್ಲಿ ವಾರ್ಷಿಕೋತ್ಸವ ಪ್ರಯುಕ್ತ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರು ಸಾಮೂಹಿಕ ಸತ್ಯನಾರಾಯಣ ವ್ರತ ಹಾಗೂ ದುರ್ಗಾ ಹೋಮ ಪೂಜೆ ನೆರವೇರಿಸಿದರು.
ಈ ವೇಳೆ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಜತೆ ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಹಾಗೂ ಇತರ ಶಾಖಾಮಠಗಳ ಸ್ವಾಮೀಜಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಹಾಮಂಗಳಾರತಿ ನೆರವೇರಿಸಿದರು.
ಬಳಿಕ ಬಿಜಿಎಸ್ ಕೇಂದ್ರೀಯ ವಿದ್ಯಾಲಯಕ್ಕೆ ಆಗಮಿಸಿದ ಶ್ರೀಗಳನ್ನು ವಿದ್ಯಾರ್ಥಿಗಳು ಭವ್ಯವಾಗಿ ಸ್ವಾಗತಿಸಿದರು. ಈ ವೇಳೆ ಶ್ರೀಗಳು ವಿದ್ಯಾರ್ಥಿಗಳ ಶೈಕ್ಷಣಿಕ ಮಾಹಿತಿ ಪಡೆದರು. ಬಳಿಕ ಮಿರ್ಜಾನ ಶಾಖಾ ಮಠದಲ್ಲಿ ಭಕ್ತರಿಗೆ ಆಶೀರ್ವಾದ ನೀಡಿದರು.
ಶಾಖಾಮಠದ ಬ್ರಹ್ಮಚಾರಿ ನಿಶ್ಚಲಾನಂದನಾಥ ಸ್ವಾಮೀಜಿ ಪೂಜಾ ಕಾರ್ಯ ಸಂಯೋಜಿಸಿದ್ದರು. ಶಾಸಕ ದಿನಕರ ಶೆಟ್ಟಿ, ಸೂರಜ ನಾಯ್ಕ, ಭಾಸ್ಕರ ಪಟಗಾರ, ಕೆ.ಟಿ. ಗೌಡ, ಎಂ.ಟಿ. ಗೌಡ, ಗೋವಿಂದ ಗೌಡ, ಸಿದ್ದಾಪುರ ಕರೆ ಒಕ್ಕಲಿಗರ ಸಂಘದ ಗೌರವಾಧ್ಯಕ್ಷ ಮಹಾಬಲೇಶ್ವರ ಗೌಡ ಸರಕುಳಿ, ಅಧ್ಯಕ್ಷ ಸುಬ್ರಾಯ ಗೌಡ ಇತರರು ಇದ್ದರು.