ಬೆಟ್ಟದಪುರ ಸಮೀಪದ ಬೆಟ್ಟದತುಂಗಾ ಪ್ರಾಥಮಿಕ ಅರೋಗ್ಯ ಕೇಂದ್ರದ ವ್ಯಾಪ್ತಿಯ ಬಿಡಿಜಿ ಕೊಪ್ಪಲು ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಉದ್ಘಾಟನೆ ಸಂದರ್ಭ ರವಿ, ಮಮತಾ ಎಂ.ಕೆ. ಸವಿತಾ, ರೇಣುಕಾ, ಹೇಮಾ ಇತರರು ಇದ್ದರು. 
ಜಿಲ್ಲೆ

ಪೌಷ್ಟಿಕಾಂಶಭರಿತ ಆಹಾರ ಸೇವಿಸಿ

ಬೆಟ್ಟದಪುರ: ಪೌಷ್ಟಿಕಾಂಶಭರಿತ ಆಹಾರ ಸೇವನೆಯಿಂದ ರೋಗಗಳು ದೂರವಾಗುತ್ತವೆ ಎಂದು ಅರೋಗ್ಯ ನಿರೀಕ್ಷಕ ರವಿ ಸಲಹೆ ನೀಡಿದರು.

ಬೆಟ್ಟದಪುರ ಸಮೀಪದ ಬೆಟ್ಟದತುಂಗಾ ಪ್ರಾಥಮಿಕ ಅರೋಗ್ಯ ಕೇಂದ್ರದ ವ್ಯಾಪ್ತಿಯ ಡಿಜಿ ಕೊಪ್ಪಲು ಅಂಗನವಾಡಿ ಕೇಂದ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಆರೋಗ್ಯವಂತ ಮಕ್ಕಳಿಂದ ದೇಶ ಸದೃಢವಾಗುತ್ತದೆ. ಗರ್ಭಿಣಿಯರಿಗೆ ರಾಷ್ಟ್ರೀಯ ಪೋಷಣ್ ಅಭಿಯಾನದ ಮೂಲಕ ಪೌಷ್ಟಿಕಾಂಶಭರಿತ ಆಹಾರ ನೀಡಲಾಗುತ್ತಿದೆ. ಇವುಗಳನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.

ನಮ್ಮ ಜೀವನ ಶೈಲಿ ಬದಲಿಸಿಕೊಳ್ಳಬೇಕು. ಆಧುನಿಕ ಜೀವನದಲ್ಲಿ ಸಣ್ಣ ಕುಟುಂಬಗಳ ಸಂಖ್ಯೆ ಹೆಚ್ಚಾಗುತ್ತಿದೆ. ತಾಯಿ, ಮಗುವಿನ ಆರೋಗ್ಯದ ಕಡೆಗೆ ಗಮನ ನೀಡಬೇಕು. ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಗಾದೆ ಅರ್ಥಮಾಡಿಕೊಂಡರೆ ನಾವು ಆರೋಗ್ಯವಂತರಾಗಿ ಇರಬಹುದು ಎಂದರು.

ಪ್ರಾಥಮಿಕ ಅರೋಗ್ಯ ಸುರಕ್ಷತಾಧಿಕಾರಿ ಮಮತಾ ಎಂ.ಕೆ, ಸಿಡಿಪಿಒ ಮೇಲ್ವಿಚಾರಕಿ ಸವಿತಾ, ಅಂಗನವಾಡಿ ಕಾರ್ಯಕರ್ತೆಯರಾದ ರೇಣುಕಾ, ಹೇಮಾ, ಮಮತಾ, ಶೀಲಾ, ಆಶಾ ಕಾರ್ಯಕರ್ತೆರಾದ ಹೇಮಾ, ಸುಮಾ ಇದ್ದರು.