ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶನ ಬಳಕೆ ನಿಷೇಧಿಸಿದ್ದು, ಮಣ್ಣಿನಿಂದ ಮಾಡಿದ ಗಣಪತಿ ಮೂರ್ತಿಗಳನ್ನು ಬಳಕೆ ಮಾಡಿ ಪರಿಸರ ಸ್ನೇಹಿ ಹಬ್ಬವನ್ನು ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚನೆ ನೀಡಿದ್ದಾರೆ.
ಪಿಒಪಿ ಬಳಕೆ ಮಾಡಿರುವ ಗಣಪತಿ ಮೂರ್ತಿಗಳ ತಯಾರಿಕೆ ಮತ್ತು ಮಾರಾಟ ಮಾಡುವುದು ಕಂಡುಬಂದರೆ ತಕ್ಷಣ ಅವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಕಳೆದ ಬಾರಿ ಪಿಒಪಿ ಗಣೇಶ ಮೂರ್ತಿಗಳನ್ನು ತಯಾರು ಮಾಡಿದ್ದ ಕಡೆಗಳಲ್ಲಿ ಈ ಬಾರಿ ಪರಿಶೀಲಿಸಬೇಕು. ತಯಾರಿಕೆ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ತಯಾರಿಕೆ ಮತ್ತು ಮಾರಾಟ ಕಂಡುಬಂದಲ್ಲಿ ಸಾರ್ವಜನಿಕರು ಸಂಬಂಧಿತ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು.