ಮಸ್ಕಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳೆಯರು ಆರ್ಥಿಕವಾಗಿ ಸದೃಢರಾಗಲು ಸಹಕಾರಿಯಾಗಿದೆ ಎಂದು ಪುರಸಭೆ ಮಾಜಿ ಸದಸ್ಯ ಹಾಗೂ ಜಿಲ್ಲಾ ಜನ ಜಾಗೃತಿ ಸಮಿತಿ ಸದಸ್ಯ ಎಂ.ಅಮರೇಶ ಹೇಳಿದರು.
ಪಟ್ಟಣದ ಶ್ರೀ ಭ್ರಮರಾಂಬ ಸಮುದಾಯ ಭವನದಲ್ಲಿ ಭಾನುವಾರ ಆಯೋಜಿಸಿದ್ದ ತಾಲೂಕು ಮಟ್ಟದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಒಕ್ಕೂಟದ ಪದಾಧಿಕಾರಿಗಳ ಸಮಾವೇಶದಲ್ಲಿ ಮಾತನಾಡಿದರು.
ಯೋಜನೆಯ ಜಿಲ್ಲಾ ನಿರ್ದೇಶಕ ಮೋಹನ ನಾಯಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬರಿಗೆ ಅನ್ನ ಕೊಡುವುದಕ್ಕಿಂತ ಅನ್ನ ತಯಾರಿಸುವ ಕಲೆ ಕಲಿಸಿದರೆ ಅವರು ಸ್ವಾವಲಂಬಿಗಳಾಗುತ್ತಾರೆ. ಧರ್ಮಸ್ಥಳ ಸಂಸ್ಥೆ ಪ್ರತಿಯೊಬ್ಬರನ್ನೂ ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶ ಹೊಂದಿದೆ ಎಂದರು. ತಾಲೂಕು ಯೋಜನಾಧಿಕಾರಿ ಶಾಲಿನಿ ಜಿ. ಐಡಿಬಿಐ ಸಿಬ್ಬಂದಿ ಬಶೀರ್, ಸುದೀಪ್ ಒಕ್ಕೂಟದ 355 ಜನ ಸದಸ್ಯರು ಭಾಗವಹಿಸಿದ್ದರು.