ಪಡುಬಿದ್ರಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿವಿಧ ಯಶಸ್ವಿ ಯೋಜನೆಗಳಿಂದ ಇಂದು ಪ್ರಪಂಚವೇ ಭಾರತದತ್ತ ತಿರುಗಿನೊಡುವಂತಾಗಿದೆ. ಆತ್ಮನಿರ್ಭರ ಭಾರತದಿಂದ ದೇಶ ಆರ್ಥಿಕವಾಗಿ ಬಲಗೊಳ್ಳುತ್ತಿದ್ದು ಭಾರತ ಜಪಾನನ್ನು ಹಿಂದಿಕ್ಕಿ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಿದೆ ಮತ್ತು ಜರ್ಮನಿಯನ್ನು ಹಿಂದಿಕ್ಕಿ ಮೂರನೇ ಸ್ಥಾನಕ್ಕೆ ತಲುಪುವ ವಿಶ್ವಾಸವಿದೆ ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಬಿಜೆಪಿ ಕಾಪು ಮಂಡಲ ವತಿಯಿಂದ ಪಕ್ಷದ ಕಚೇರಿಯಲ್ಲಿ ಬುಧವಾರ ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನ ಕಾರ್ಯಾಗಾರದಲ್ಲಿ ಮಾತನಾಡಿದರು. ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ.ಸುವರ್ಣ, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ, ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ಕಾಪು ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್, ಸದಾನಂದ ಪ್ರಭು, ಗಿರೀಶ್ ಅಂಚನ್ ಉಪಸ್ಥಿತರಿದ್ದರು.