ಜಿಲ್ಲೆ

ಎಡನೀರು ಮಠದಲ್ಲಿ ಶ್ರೀಮದ್ ದೇವೀ ಭಾಗವತ ಸಪ್ತಾಹ

ಸೌಮ್ಯ ಆರ್

ಕಾಸರಗೋಡು: ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ನಾಲ್ಕನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ ಅಂಗವಾಗಿ ಡಾ. ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ ವತಿಯಿಂದ ಸೇವಾರೂಪದಲ್ಲಿ ನಡೆದು ಬರುತ್ತಿರುವ ಶ್ರೀಮದ್ ದೇವೀ ಭಾಗವತ ಸಪ್ತಾಹ ಮತ್ತು ಯಕ್ಷಗಾನ ತಾಳಮದ್ದಳೆ ನವಾಹ ಕಾರ್ಯಕ್ರಮದ ಸಮಾರೋಪ ಸಮಾರಂಭ ಆ.11ರಂದು ಮಧ್ಯಾಹ್ನ 2.30ಕ್ಕೆ ಶ್ರೀ ಮಠದ ಸಭಾಂಗಣದಲ್ಲಿ ನಡೆಯಲಿದೆ.

ಕಾಸರಗೋಡು ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದ ವತಿಯಿಂದ ಮಹಿಷಾಸುರ ವಧೆ ಯಕ್ಷಗಾನ ಬೊಂಬೆಯಾಟ ನಡೆಯಲಿದೆ. ಸಂಜೆ 4ಕ್ಕೆ ‘ಶಾಂಭವೀ ವಿಲಾಸ’ ಯಕ್ಷಗಾನ ತಾಳಮದ್ದಳೆ ನಡೆಯಲಿದೆ. ಸಂಜೆ 6ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಮಂಜೇಶ್ವರ ಶಾಸಕ ಎ.ಕೆ.ಎಂ ಅಶ್ರಫ್ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ.ಟಿ.ಶ್ಯಾಮ ಭಟ್ ಸಮಾರೋಪ ಭಾಷಣ ಮಾಡುವರು. ಚಾತುರ್ಮಾಸ್ಯ ಸಮಿತಿ ಅಧ್ಯಕ್ಷ ಬಲರಾಮ ಆಚಾರ್ಯ ಮುಖ್ಯ ಅತಿಥಿಯಾಗಿ ಭಾಗವಹಿಸುವರು.

ಯಕ್ಷಗಾನದ ಹಿರಿಯ ಕಲಾವಿದ ಕುಂಬಳೆ ಶ್ರೀಧರ ರಾವ್ ಮತ್ತು ಹಿರಿಯ ಯಕ್ಷಗಾನ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಸಂಸ್ಮರಣೆ ನಡೆಯಲಿದೆ. ಖ್ಯಾತ ಯಕ್ಷಗಾನ ಕಲಾವಿದ ವಾಸುದೇವ ರಂಗಭಟ್ಟ ಸಂಸ್ಮರಣಾ ಭಾಷಣ ಮಾಡಲಿದ್ದಾರೆ. ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.