ಅತ್ತನೂರು ಗ್ರಾಮದಲ್ಲಿ ಸಹಿಪ್ರಾ ಶಾಲಾ ಕೊಠಡಿಗಳನ್ನು ಸಚಿವ ಎನ್.ಎಸ್.ಬೋಸರಾಜು ಉದ್ಘಾಟಿಸಿದರು. ಶಾಸಕ ಜಿ.ಹಂಪಯ್ಯ ನಾಯಕ, ಜಿಪಂ ಮಾಜಿ ಸದಸ್ಯ ಮಹಾಂತೇಶ ಪಾಟೀಲ್ ಅತ್ತನೂರು, ತಾಪಂ ಮಾಜಿ ಅಧ್ಯಕ್ಷ ದಾನಗೌಡ ಇತರರಿದ್ದರು. 
ಜಿಲ್ಲೆ

ಶಿಕ್ಷಣದಿಂದ ಸವಾರ್ಂಗೀಣ ಅಭಿವೃದ್ಧಿ ಸಾಧ್ಯ

ಸಿರವಾರ: ಕೆಕೆಆರ್‌ಡಿಬಿಯಿಂದ ಗ್ರಾಮೀಣ ಭಾಗದ ಶಿಕ್ಷಣಕ್ಕೆ ಹೆಚ್ಚಿನ ಅನುದಾನ ನೀಡಲಾಗುತ್ತಿದೆ. ಅತ್ತನೂರಿನ ಕುಡಿಯುವ ನೀರಿನ ಕೆರೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಹೇಳಿದರು.

ತಾಲೂಕಿನ ಅತ್ತನೂರಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕ ಪ್ರದೇಶಭಿವೃದ್ಧಿ ಮಂಡಳಿಯಿಂದ ಮೈಕ್ರೋ ಯೋಜನೆಯಡಿ ನಿರ್ಮಿಸಿದ ಸಹಿಪ್ರಾ ನೂತನ ಶಾಲಾ ಕೊಠಡಿಗಳು ಹಾಗೂ ಸೌರಶಕ್ತಿ ವ್ಯವಸ್ಥೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಶಿಕ್ಷಣದಿಂದ ಮಾತ್ರ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ. ಆದ್ದರಿಂದ ಕಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಶೈಕ್ಷಣಿಕ ಬಲವರ್ಧನೆಗಾಗಿ ಹೆಚ್ಚುವರಿ ಅನುದಾನ ನೀಡಲಾಗುತ್ತಿದೆ. ಪಕ್ಷಾತೀತವಾಗಿ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದ್ದು, ಎಲ್ಲರ ಸಹಕಾರವಿರಲಿ ಎಂದರು.

ಶಾಸಕ ಜಿ.ಹಂಪಯ್ಯ ನಾಯಕ, ಜಿಪಂ ಮಾಜಿ ಸದಸ್ಯ ಮಹಾಂತೇಶ ಪಾಟೀಲ್ ಅತ್ತನೂರು, ತಾಪಂ ಮಾಜಿ ಅಧ್ಯಕ್ಷ ದಾನಗೌಡ, ಪ್ರಮುಖರಾದ ಬಸವರಾಜ ಪಾಟೀಲ್, ಜಿ.ಶಿವಮೂರ್ತಿ, ಬಸವಲಿಂಗಸ್ವಾಮಿ, ಬಿಇಒ ಚಂದ್ರಶೇಖರ ಇತರರಿದ್ದರು.