ಜಿಲ್ಲೆ

ಕನ್ನಡದ ನಂಬರ್ 1 ಪತ್ರಿಕೆ ವಿಜಯವಾಣಿ ಹಾಗೂ ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಸಹಯೋಗದಲ್ಲಿ ಎಜುಕೇಷನ್ ಎಕ್ಸಪೋ

ವಿಜಯಪುರ: ಕನ್ನಡದ ನಂಬರ್ 1 ಪತ್ರಿಕೆ ವಿಜಯವಾಣಿ ಹಾಗೂ ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಸಹಯೋಗದಲ್ಲಿ ಬಸವನಾಡು ವಿಜಯಪುರದಲ್ಲಿ ಎಜುಕೇಷನ್ ಎಕ್ಸಪೋ ಹಮ್ಮಿಕೊಳ್ಳಲಾಗಿದೆ. ನಗರದ ಸಂಗನಬಸವ ಸಮುದಾಯ ಭವನದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಎಕ್ಸಪೋ ನಡೆಯಲಿದೆ. ಕಾರ್ಯಕ್ರಮಕ್ಕೆ ಕ್ಷಣಗಣನೆ ಶುರುವಾಗಿದ್ದು, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಉದ್ಘಾಟಿಸಲಿದ್ದಾರೆ. ಇಂದು ಬೆಳಗ್ಗೆ 10ಗಂಟೆಗೆ ಚಾಲನೆ ನೀಡಲಿದ್ದು, ವಿಜಯಪುರ, ಬಾಗಲಕೋಟೆ ಸೇರಿದಂತೆ ಸುತ್ತಮುತ್ತಲಿನ ಸಾವಿರಾರು ವಿದ್ಯಾರ್ಥಿಗಳು ಹಾಗೂ ಪಾಲಕರು ಆಗಮಿಸಲಿದ್ದಾರೆ.