ಜಿಲ್ಲೆ

ಅಕ್ಕಮ್ಮಗೆ ಶಿಕ್ಷಣ ರತ್ನ ಪ್ರಶಸ್ತಿ ಪ್ರದಾನ

ಸೌಮ್ಯ ಆರ್

ಬೆಳ್ತಂಗಡಿ: ಸೂರ್ಯ ಫೌಂಡೇಷನ್ ಬೆಂಗಳೂರು, ಸ್ಪಾರ್ಕ್ ಅಕಾಡೆಮಿ ಬೆಂಗಳೂರು, ಇಂಡೋ ಗ್ಲೋಬಲ್ ಇನ್‌ಸ್ಟಿಟ್ಯೂಷನ್ ಬೆಂಗಳೂರು ಸಹಯೋಗದಲ್ಲಿ ಸಹಕಾರ ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಮೈಸೂರು, ಬೆಂಗಳೂರಿನ ಇಂಡೋ ಗ್ಲೋಬ್ ಪಿ.ಯು.ಕಾಲೇಜು ಆವರಣದಲ್ಲಿ ನಡೆದ ರಾಜ್ಯಮಟ್ಟದ ಶೈಕ್ಷಣಿಕ ಸಮ್ಮೇಳನದಲ್ಲಿ ತಾಲೂಕಿನ ಕೊಕ್ರಾಡಿ ಪ್ರೌಢಶಾಲೆಯ ಅಕ್ಕಮ್ಮ ಅವರಿಗೆ ಶಿಕ್ಷಣ ರತ್ನ ಪ್ರಶಸ್ತಿ-2024 ನೀಡಿ ಗೌರವಿಸಲಾಯಿತು.

ಬೆಳ್ತಂಗಡಿ ತಾಲೂಕಿನವರಾಗಿದ್ದು ಶಿಕ್ಷಣ ಕ್ಷೇತ್ರದಲ್ಲಿ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸೂಕ್ತ ಮಾರ್ಗದರ್ಶನ ನೀಡುತಿದ್ದಾರೆ. ಶಾಲೆಯ ಅಭಿವೃದ್ಧಿಗೆ ಶ್ರಮಿಸುತ್ತಾ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವ ಇವರ ಅನುಪಮ ಸೇವೆಯನ್ನು ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು.