ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ೇತ್ರದಲ್ಲಿ ಶಿಣ ಮತ್ತು ಆರೋಗ್ಯ ಸೇವೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ತಿಳಿಸಿದರು.
ಗ್ರಾಮೀಣ ವಿಧಾನಸಭಾ ೇತ್ರ ವ್ಯಾಪ್ತಿಯ ವಿವಿಧೆಡೆ 85 ಲ ರೂ. ವೆಚ್ಚದಲ್ಲಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಸೋಮವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿ, ಯಾವುದೇ ಗ್ರಾಮದಲ್ಲಿ ಶಿಣಕ್ಕೆ ಮೂಲಭೂತ ಸೌಲಭ್ಯ ಕೊರತೆ ಆಗಬಾರದೆನ್ನುವುದು ಈ ಭಾಗದ ಶಾಸಕರೂ ಆಗಿರುವ ಸಚಿವೆ ಲಕ್ಷಿ$್ಮ ಹೆಬ್ಬಾಳ್ಕರ್ ಅವರ ಆಶಯ. ಅದಕ್ಕೆ ತಕ್ಕಂತೆ ಶಾಲೆಗಳ ಕಟ್ಟಡ ನಿರ್ಮಾಣ, ದುರಸ್ತಿ, ಆಟದ ಮೈದಾನ, ಕಾಂಪೌಂಡ್ ನಿರ್ಮಾಣ, ಕ್ರೀಡಾ ಸಾಮಗ್ರಿ ಪೂರೈಕೆ, ಕುಡಿಯುವ ನೀರು ವ್ಯವಸ್ಥೆ, ಶಿಕರ ನೇಮಕ ಎಲ್ಲದಕ್ಕೂ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರದ ಅನುದಾನದ ಜತೆಗೆ ಲಕ್ಷಿ$್ಮತಾಯಿ ಫೌಂಡೇಶನ್ನಿಂದ ಸಹ ಹಣ ಒದಗಿಸಲಾಗುತ್ತಿದೆ ಎಂದರು.
ಚಂದನಹೊಸೂರ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ 2 ಹೆಚ್ಚುವರಿ ಕೊಠಡಿ ನಿರ್ಮಾಣದ 26.22 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು. 28.68 ಲ ರೂ. ವೆಚ್ಚದಲ್ಲಿ ತಾರಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2 ಹೆಚ್ಚುವರಿ ಕೊಠಡಿ ನಿರ್ಮಾಣದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು. ಬಸರೀಕಟ್ಟಿ ಗ್ರಾಮದ ಸರ್ಕಾರಿ ಮರಾಠಿ ಹಿರಿಯ ಪ್ರಾಥಮಿಕ ಶಾಲೆಯ 2 ಹೆಚ್ಚುವರಿ ಕೊಠಡಿ ನಿರ್ಮಾಣದ 26.95 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು. ಸಿದ್ದರಾಯಿ ನಾಗರೋಳಿ, ಬಸವರಾಜ ಕೊಂಡಸಕೊಪ್ಪ, ದಿಲೀಪ ಕೊಂಡಸಕೊಪ್ಪ, ಹೊಳೆಪ್ಪ ಪೂಜೇರಿ, ರಾಜು ಹಿರೋಜಿ, ಎಸ್ಡಿಎಂಸಿ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.