ಡಿ.ದೇವರಾಜ ಅರಸು ಅವರ 109ನೇ ಜನ್ಮಾ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ವಿ.ಸುನಿಲ್ ಕುಮಾರ್ ಉದ್ಘಾಟಿಸಿದರು 
ಜಿಲ್ಲೆ

ಶಿಕ್ಷಣ ಕ್ರಾಂತಿಗೆ ಅರಸು ಮುನ್ನುಡಿ

ಇಂದಿರಾ ಎನ್ ಕೆ

ಕಾರ್ಕಳ: ಡಿ ದೇವರಾಜ ಅರಸರು ಹಿಂದುಳಿದ ವರ್ಗಗಳಿಗೆ ಸೇರಿದ ಜನರ ಶಿಕ್ಷಣದ ಹಾಗೂ ಮೌನ ಸಾಮಾಜಿಕ ಕ್ರಾಂತಿಗೆ ಮುನ್ನುಡಿ ಬರೆದವರು. ಸಮಾಜದಲ್ಲಿ ತುಳಿತಕ್ಕೊಳಗಾದವರ ಪರವಾಗಿದ್ದು ನ್ಯಾಯಕ್ಕೆ ಆದ್ಯತೆ ನೀಡುತ್ತಿದ್ದರು ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಹೇಳಿದರು.
ಉಡುಪಿ ಜಿಲ್ಲಾ ಪಂಚಾಯಿತಿ, ತಾಲೂಕು ಆಡಳಿತ, ಕಾರ್ಕಳ ಪುರಸಭಾ, ಕಾರ್ಕಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಕಾರ್ಕಳ ದೇವರಾಜ ಅರಸು ಭವನದಲ್ಲಿ ನಡೆದ ಡಿ.ದೇವರಾಜ ಅರಸು ಅವರ 109ನೇ ಜನ್ಮಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾರ್ಕಳ ತಹಸಿಲ್ದಾರ್ ಪ್ರತಿಭಾ ಮಾತನಾಡಿ, ಸಾಮಾನ್ಯ ರೈತನಾಗಿ ಬದುಕಿ, ತಳ ಸಮುದಾಯದ ಏಳಿಗೆಗೆ ದೇವರಾಜ ಅರಸು ಶ್ರಮಿಸಿದ್ದಾರೆ ಎಂದರು. ಹೆಬ್ರಿ ಸಮಾಜ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ಜಯಂತಿ, ಪಿಎಸ್ ವೈ ಸುಂದರ್, ಪುರಸಭಾ ಮುಖ್ಯಾಧಿಕಾರಿ ರೂಪಾ ಶೆಟ್ಟಿ ಉಪಸ್ಥಿತರಿದ್ದರು. ಸೃಷ್ಟಿ ಪ್ರಾರ್ಥಿಸಿದರು. ಕಲ್ಯಾಣಾಧಿಕಾರಿ ಅನಂತ್ ಎನ್.ಭಟ್ಕಳ್ ಸ್ವಾಗತಿಸಿದರು.