ಅಳವಂಡಿ ಎಸ್‌ಎಸ್‌ಪಿಯು ಕಾಲೇಜಿನಲ್ಲಿ ಆಯೋಜಿಸಿದ್ದ ಎನ್ ಎಸ್ ಎಸ್ ಘಟಕದ ದೈನಂದಿನ ಚಟುವಟಿಕೆ ಉದ್ಘಾಟನೆ ಕಾರ್ಯಕ್ರಮವನ್ನು ಗಿಡಕ್ಕೆ ನೀರು ಹಾಕುವ ಮೂಲಕ ಚಾಲನೆ ನೀಡಲಾಯಿತು. ಪ್ರಮುಖರಾದ ಚಂದ್ರಶೇಖರ ದೊಡ್ಡಮನಿ, ಡಾ.ಆರ್.ಎಚ್.ಜಂಗಣವಾರಿ, ಎ.ಟಿ.ಕಲ್ಮಠ, ಡಿ.ಜಿ.ಲಕ್ಕನಗೌಡರ, ಸಿದ್ದು ಅಂಗಡಿ, ನವೀನ, ದೇವಮ್ಮ ಇತರರು ಇದ್ದರು. 
ಜಿಲ್ಲೆ

ಶಿಕ್ಷಣವೆಂಬ ಆಸ್ತಿಗಳಿಸಲು ತಪಸ್ಸು ಮಾಡಿ

ರುದ್ರಪ್ಪ ವಾಲಿ

ಅಳವಂಡಿ: ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯದ ಮೇಲೆ ನಂಬಿಕೆ ಇಟ್ಟುಕೊಳ್ಳಬೇಕು. ಇಲ್ಲದಿದ್ದರೆ ಜೀವನ ಕಟ್ಟಿಕೊಳ್ಳಲು ಸಾಧ್ಯವಿಲ್ಲ ಎಂದು ಮುಂಡರಗಿಯ ಕೆ.ಆರ್.ಬೆಲ್ಲದ ಕಾಲೇಜಿನ ಉಪನ್ಯಾಸಕ ಡಾ.ಆರ್.ಎಚ್.ಜಂಗಣವಾರಿ ತಿಳಿಸಿದರು.

ಗ್ರಾಮದ ಶ್ರೀ ಸಿದ್ದೇಶ್ವರ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ದೈನಂದಿನ ಚಟುವಟಿಕೆಯ ಉದ್ಘಾಟನೆ ಹಾಗೂ ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವನ್ನು ಗಿಡಕ್ಕೆ ನೀರು ಹಾಕುವ ಮೂಲಕ ಚಾಲನೆ ನೀಡಿ ಶನಿವಾರ ಮಾತನಾಡಿದರು.

ಕಲಿಕೆ ಮೂಲಕ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಆಗಲಿದೆ. ಸಮಾಜಮುಖಿ ಕೆಲಸ ಮಾಡುವ ಗುಣಗಳನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಇದು ಸಮಾಜ ನಿಮ್ಮನ್ನು ಗುರುತಿಸುವಂತೆ ಮಾಡುತ್ತದೆ. ಶಿಕ್ಷಣವೆಂಬ ಆಸ್ತಿಯನ್ನು ಪಡೆಯಲು ವಿದ್ಯಾರ್ಥಿಗಳು ತಪಸ್ಸು ಮಾಡಬೇಕು. ನಿಮ್ಮ ಜೀವನದಲ್ಲಿ ಸಮಯ ಅತ್ಯಮೂಲ್ಯ. ಈ ಸಮಯದಲ್ಲಿ ಒಳ್ಳೆಯ ಹವ್ಯಾಸ ರೂಢಿಸಿಕೊಳ್ಳಬೇಕು. ಶಿಕ್ಷಕರು ಕೂಡ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದರು.