ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತ್ರಜ್ಯೋತಿ ಕಾಲೇಜ್ ಆಫ್ ಪ್ಯಾರಾಮೆಡಿಕಲ್ ಸೈನ್ಸಸ್ ಟಿಕೋತ್ಸವ ಹಾಗೂ ನೂತನ ಸ್ನಾತಕೋತ್ತರ ಪದವಿ ಸೆಂಟರ್ ಉದ್ಘಾಟಿಸಿದರು.  
ಜಿಲ್ಲೆ

ಪ್ರಸಾದ್ ನೇತ್ರಾಲಯದೊಂದಿಗೆ ಶೈಕ್ಷಣಿಕ ಒಪ್ಪಂದ

ಇಂದಿರಾ ಎನ್ ಕೆ

ವಿಜಯವಾಣಿ ಸುದ್ದಿಜಾಲ ಉಡುಪಿ

ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜು ಮತ್ತು ಗೋವಾ ಸರ್ಕಾರದ ಯೋಗ ಮತ್ತು ನ್ಯಾಚುರೋಪಥಿ ಕಾಲೇಜಿನೊಂದಿಗೆ ಈಗಾಗಲೇ ಶೈಕ್ಷಣಿಕ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ಹೆಚ್ಚನ ಉದ್ಯೋಗಾವಕಾಶಗಳು ಲಭ್ಯವಾಗಲಿವೆ ಎಂದು ಗೋವಾ ರಾಜ್ಯದ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಹೇಳಿದರು.

ನೇತ್ರ ಜ್ಯೋತಿ ಚಾರಿಟೆಬಲ್ ಟ್ರಸ್ಟ್ ಮತ್ತು ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಸಹಸಂಸ್ಥೆ ನೇತ್ರಜ್ಯೋತಿ ಇನ್‌ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್, ನೇತ್ರಜ್ಯೋತಿ ಕಾಲೇಜ್ ಆಫ್ ಪ್ಯಾರಾಮೆಡಿಕಲ್ ಸೈನ್ಸಸ್ ಟಿಕೋತ್ಸವ ಹಾಗೂ ನೂತನ ಸ್ನಾತಕೋತ್ತರ ಪದವಿ ಸೆಂಟರ್ ಉದ್ಘಾಟಿಸಿ ಮಾತನಾಡಿದರು.

ಆರೋಗ್ಯ ಕ್ಷೇತ್ರದಲ್ಲಿ ಅರೆ ವೈದ್ಯಕೀಯ ಸಿಬ್ಬಂದಿಗೆ ಹೆಚ್ಚಿನ ಬೇಡಿಕೆ ಇದೆ. ಭಾರತದಲ್ಲಿ 50 ಲಕ್ಷ ಹಾಗೂ ಕರ್ನಾಟಕದಲ್ಲಿ 30 ಸಾವಿರ ನುರಿತ ಸಿಬ್ಬಂದಿ ಕೊರತೆ ಇದೆ. ಬೇಡಿಕೆ ಮತ್ತು ಪೂರೈಕೆ ಮಧ್ಯೆ ಅಂತರ ಕಡಿಮೆಗೊಳಿಸುವ ನಿಟ್ಟಿನಲ್ಲಿ ಪ್ಯಾರಾಮೆಡಿಕಲ್ ಸಂಸ್ಥೆಗಳು ಮಹತ್ವದ ಪಾತ್ರ ವಹಿಸಿವೆ ಎಂದರು.

2 ಲಕ್ಷ ವಿದ್ಯಾರ್ಥಿಗಳ ತಪಾಸಣೆ: ಗೋವಾ ರಾಜ್ಯದಲ್ಲಿ 2 ಸಾವಿರ ಶಿಕ್ಷಕರು ಹಾಗೂ 2 ಲಕ್ಷಕ್ಕೂ ಅಧಿಕ ಸರ್ಕಾರಿ ಶಾಲೆ ವಿದ್ಯಾರ್ಥಿಗಳ ಕಣ್ಣಿನ ತಪಾಸಣೆಯನ್ನು ಪ್ರಸಾದ್ ನೇತ್ರಾಲಯ ವತಿಯಿಂದ ಕೈಗೊಳ್ಳಲಾಗಿತ್ತು. ಇದರಲ್ಲಿ 30 ಸಾವಿರ ವಿದ್ಯಾರ್ಥಿಗಳಿಗೆ ಕನ್ನಡಕ ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭ ಸಿಎಂ ವಿವಿಧ ಪದವಿಗಳನ್ನು ಪೂರೈಸಿದ 230 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ವಾಡಿದರು. ವಿದ್ಯಾರ್ಥಿಗಳಾದ ಕಾರ್ತಿಕ ಪೂಜಾರಿ ಮತ್ತು ಸಂಕೇತ್ ಅವರಿಗೆ ವೀಣಾ ರಘುರಾಮ್ ರಾವ್ ದತ್ತಿ ಪುರಸ್ಕಾರ ನೀಡಲಾಯಿತು.

ಶಾಸಕ ಯಶ್‌ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು. ನೇತ್ರ ಜ್ಯೋತಿ ಚಾರಿಟೆಬಲ್ ಟ್ರಸ್ಟ್ ಟ್ರಸ್ಟಿಗಳಾದ ರಶ್ಮಿ ಕೃಷ್ಣಪ್ರಸಾದ್, ಕೆ.ರಘುರಾಮ ರಾವ್, ಸಂಸ್ಥೆ ಸಿಒಒ ಡಾ.ಗೌರಿ ಪ್ರಭು ಉಪಸ್ಥಿತರಿದ್ದರು. ಟ್ರಸ್ಟ್ ಸ್ಥಾಪಕ ಅಧ್ಯಕ್ಷ ಡಾ.ಕೆ.ಕೃಷ್ಣಪ್ರಸಾದ್ ಸ್ವಾಗತಿಸಿದರು. ಬಾಲಕೃಷ್ಣ ಮುದ್ದೋಡಿ ಕಾರ್ಯಕ್ರಮ ನಿರೂಪಿಸಿದರು. ಅಶೇಲ್ ರಕ್ಷಾ ವಂದಿಸಿದರು.

ಬಡವರ್ಗದ ವಿದ್ಯಾರ್ಥಿಗಳಿಗೂ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುವಂತಾಗಬೇಕು. ರೋಗಿಗಳ ಆರೈಕೆಯಲ್ಲಿ ವೈದ್ಯರಿಗಿಂತಲೂ ಅರೆ ವೈದ್ಯಕೀಯ ಸಿಬ್ಬಂದಿ ಪಾತ್ರ ಮಹತ್ವದ್ದಾಗಿದೆ. ಜೀವನದಲ್ಲಿ ಯಶಸ್ಸಿಗೆ ಅಡ್ಡದಾರಿಗಳಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಶ್ರಮ ವಹಿಸಿ ವೃತ್ತಿ ಜೀವನದಲ್ಲಿ ಉನ್ನತ ಸ್ಥಾನ ಪಡೆಯಬೇಕು. ಡಾ.ಎಚ್.ಎಸ್.ಬಲ್ಲಾಳ್, ಸಹಕುಲಾಧಿಪತಿ ವಾಹೆ