ಜಿಲ್ಲೆ

ಶ್ರೇಯಸ್ ಪಟೇಲ್ ಗೆಲುವಿಗೆ ಶ್ರಮಿಸೋಣ

ಲಲಾಟಾಕ್ಷ ಎಸ್

ಅರಸೀಕೆರೆ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ಶ್ರೇಯಸ್ ಪಟೇಲ್ ಗೆಲುವಿಗೆ ಎಲ್ಲರೂ ಒಗ್ಗೂಡಿ ಹೋರಾಟ ನಡೆಸೋಣ ಎಂದು ರಾಜ್ಯ ಗೃಹಮಂಡಳಿ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು.


ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ತನ್ನದೆ ರಾಜಕೀಯ ನಂಟಿನ ಬಳಗ ಹೊಂದಿರುವ ಮಾಜಿ ಸಚಿವ ದಿ.ಪುಟ್ಟಸ್ವಾಮಿಗೌಡರ ಮೊಮ್ಮಗ ಶ್ರೇಯಸ್ ಪಟೇಲ್ ಸ್ಪರ್ಧೆಗೆ ಪಕ್ಷದ ಹೈಕಮಾಂಡ್ ಹಸಿರು ನಿಶಾನೆ ತೋರಿದೆ. ರಾಜ್ಯ ಸರ್ಕಾರ ಜನರಿಗೆ ನೀಡುತ್ತಿರುವ ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟು ಮತದಾರರ ಮನಗೆಲ್ಲಲು ಸಂಕಲ್ಪ ಮಾಡಬೇಕಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪರ ವಾತಾವರಣವಿದ್ದು, ಪಕ್ಷದ ಅಭ್ಯರ್ಥಿ ಗೆಲ್ಲುವ ಎಲ್ಲ ಅವಕಾಶಗಳಿವೆ. ಆದ್ದರಿಂದ ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ಕಾರ್ಯಕರ್ತರು ಹಾಗೂ ಮುಖಂಡರಿಗೆ ಕರೆ ನೀಡಿದರು.